Breaking NewsLatest

Bihar spurious liquor: ಕಳ್ಳಬಟ್ಟಿ ಸೇವಿಸಿ ಬಿಹಾರದ ಎರಡು ಜಿಲ್ಲೆಯಲ್ಲಿ 24 ಮಂದಿ ಸಾವು

ಪಟ್ನಾ: ಕಳ್ಳಬಟ್ಟಿ ಸೇವಿಸಿ ಬಿಹಾರ ರಾಜ್ಯದ ಗೋಪಾಲ್​ಗಂಜ್ ಜಿಲ್ಲೆಯಲ್ಲಿ 16 ಹಾಗೂ ಪಶ್ಚಿಮ ಚಂಪಾರಣ್‌ ಜಿಲ್ಲೆಯಲ್ಲಿ 8 ಸೇರಿದಂತೆ ಒಟ್ಟು 24 ಮಂದಿ ಮೃತಪಟ್ಟಿದ್ದಾರೆ.

ಬಿಹಾರ ರಾಜ್ಯದಲ್ಲಿ ಸಂಪೂರ್ಣ ಪಾನನಿಷೇಧ ಜಾರಿಯಲ್ಲಿದ್ದರೂ ಈ ದುರ್ಘಟನೆ ಸಂಭವಿಸಿದ್ದು, ಪಶ್ಚಿಮ ಚಂಪಾರಣ್ ಜಿಲ್ಲೆಯ ಕೇಂದ್ರ ಸ್ಥಾನವಾಗಿರುವ ಬೆಟ್ಟಯಾ ಸಮೀಪದ ತೆಲ್ಹುವಾ ಗ್ರಾಮದಲ್ಲಿ ನವೆಂಬರ್ 4 ರಂದು ಕಳ್ಳಬಟ್ಟಿ ಸೇವಿಸಿ ಎಂಟು ಮಂದಿ ಅಸು ನೀಗಿದ್ದಾರೆ. ಗೋಪಾಲ್​ಗಂಜ್​ನಲ್ಲಿ ನಡೆದ ಮತ್ತೊಂದು ಪ್ರಕರಣದಲ್ಲಿ ನವೆಂಬರ್ 4 ರಂದು ಕಳ್ಳಬಟ್ಟಿ ಸೇವನೆಯಿಂದ ಮೃತಪಟ್ಟವರ ಸಂಖ್ಯೆಯು 16ಕ್ಕೆ ಏರಿದೆ.

ಮೇಲ್ನೋಟಕ್ಕೆ ಈ ಸಾವುಗಳು ಯಾವುದೋ ವಿಷಕಾರಿ ಪದಾರ್ಥ ಸೇವನೆಯಿಂದ ಸಂಭವಿಸಿರುವುದು ಕಂಡುಬಂದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನವೆಂಬರ್ 2 ಮತ್ತು 3 ರ ನಡುವೆ ನಡೆದ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related Articles

Leave a Reply

Your email address will not be published.

Back to top button