Breaking NewsLatest

ಯುಪಿ ಚುನಾವಣೆಯಲ್ಲಿ ಸ್ಪರ್ಧೆ ಇಲ್ಲ: ಅಖಿಲೇಶ್ ಯಾದವ್

ಲಕ್ನೋ: ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ತಾವು ಸ್ಪರ್ಧಿಸುವುದಿಲ್ಲ ಎಂದ ಉಸಮಾಜವಾದಿ ಪಕ್ಷದ ನಾಯಕ ಅಖಿಲೆಶ್ ಯಾದವ್ ಹೇಳಿದ್ದಾರೆ.

ಇದೇ ವೇಳೆ ಅವರು, ಚುನಾವಣೆಗಾಗಿ ಸಮಾಜವಾದಿ ಪಕ್ಷ ಮತ್ತು ರಾಷ್ಟ್ರೀಯ ಲೋಕದಳ (ಆರ್​ಎಲ್​ಡಿ) ನಡುವೆ ಮೈತ್ರಿ ಅಂತಿಮಗೊಂಡಿದೆ ಎಂದೂ ಸ್ಪಷ್ಟಪಡಿಸಿದ್ದಾರೆ.

ಆರ್​ಎಲ್​ಡಿ ಜೊತೆಗಿನ ಮೈತ್ರಿ ಅಂತಿಮಗೊಂಡಿದ್ದು ಸೀಟು ಹಂಚಿಕೆ ಕುರಿತ ನಿರ್ಧಾರವಷ್ಟೇ ಬಾಕಿಯಿದೆ ಎಂದು ಅಖಿಲೇಶ್ ಹೇಳಿದ್ದಾರೆ.

ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುತ್ತಿದ್ದ ಅಖಿಲೇಶ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದಿರುವುದು ರಾಜಕೀಯದಲ್ಲಿ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

Related Articles

Leave a Reply

Your email address will not be published.

Back to top button