Breaking News

ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಧ್ವಜಾರೋಹಣ ಯತ್ನ: ಹಲವರು ಪೊಲೀರ್ಸ ವಶಕ್ಕೆ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಸರ್ಕಾರಗಳಿಂದ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ಕಲಬುರಗಿಯಲ್ಲಿ ಪ್ರತ್ಯೇಕ ಧ್ವಜಾರೋಹಣಕ್ಕೆ ಮುಂದಾಗಿದ್ದ 20ಕ್ಕೂ ಅಧಿಕ ಜ‌ನ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜ್ಯೋತ್ಸವದ ಹಿನ್ನಲೆ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ನಗರದ ಕೋರ್ಟ್ ರಸ್ತೆಯಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಒತ್ತಾಯಿಸಿ ಹೋರಾಟ ನಡೆಸಲಾಯಿತು‌. ಪ್ರತ್ಯೇಕ ರಾಜ್ಯ ಆಗಲೇಬೇಕು ಎಂದು ಘೋಷಣೆ ಕೂಗಿ ಪ್ರತ್ಯೇಕ ರಾಜ್ಯದ ಧ್ವಜಾರೋಹಣ ನೇರವೇರಿಸಲು ಮುಂದಾದಾಗ 20ಕ್ಕೂ ಹೆಚ್ವು ಜನರನ್ನು ಪೋಲಿಸರು‌ ವಶಕ್ಕೆ ಪಡೆದರು‌.

ಈ ವೇಳೆ ಮಾತನಾಡಿದ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಮ್ ಎಸ್ ಪಾಟೀಲ್ ನರಿಬೋಳ ಅವರು, ಕಲ್ಯಾಣ ಕರ್ನಾಟಕಕ್ಕೆ ಎಲ್ಲಾ ಸರ್ಕಾರಗಳು ಮಲತಾಯಿ ಧೋರಣೆ ತಾಳುತ್ತೀವೆ. 371ಜೆ ಜಾರಿಯಾದ್ರು ಸಹ ಈ ಭಾಗದಕ್ಕೆ ಅನ್ಯಾಯ ಮಾಡಲಾಗುತ್ತಿದೆ. ಈ ಭಾಗದ ಎಲ್ಲಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸಹ ವಿಳಮಾಡಲಾಗುತ್ತಿದೆ. ಈ ಮಲತಾಯಿ ಧೋರಣೆ ಮುಂದುವರೆದರೆ ಮುಂಬರುವ ದಿನಗಳಲ್ಲಿ ಪ್ರತ್ಯೇಕ ರಾಜ್ಯದ ಹೋರಾಟ ತೀವ್ರಗೊಳಿಸಿ ತೆಲಂಗಾಣದ ಮಾದರಿಯಲ್ಲಿ ಹೋರಾಟ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

Related Articles

Leave a Reply

Your email address will not be published.

Back to top button