Breaking NewsLatest
Mamata Banerjee: ಭವಾನಿಪುರ ಉಪಚುನಾವಣೆ: ಮಮತಾ ಬ್ಯಾನರ್ಜಿಗೆ ಭರ್ಜರಿ ಗೆಲವು
ಕೊಲ್ಕತ್ತಾ: ಮಮತಾ ಬ್ಯಾನರ್ಜಿ ಅವರಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಬಹಳ ಅಗತ್ಯವಾಗಿದ್ದ ಭವಾನಿಪುರ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದೆ.
ಟಿಎಂಸಿ ಅಭ್ಯರ್ಥಿ ಮಮತಾ ಬ್ಯಾನರ್ಜಿ ಅವರು ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೂವಾಲ್ ವಿರುದ್ಧ 58 ಸಾವಿರಕ್ಕೂ ಹೆಚ್ಚು ಮತಗಳಿಂದ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ.
2011ರಲ್ಲ ಇದೇ ಭಬಾನಿಪುರ್ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರು 54,213 ಮತಗಳ ಅಂತರದಿಂದ ಗೆದ್ದಿದ್ದರು. ಹತ್ತು ವರ್ಷಗಳ ಬಳಿಕ ಅವರ ಗೆಲುವಿನ ಅಂತರ ಇನ್ನೂ ಹೆಚ್ಚಾಗಿದೆ.
ಕಳೆದ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಪರಾಭವಗೊಂಡಿದ್ದರು. ಚುನಾವಣೆಯಲ್ಲಿ ಟಿಎಂಸಿಗೆ ಬಹುಮತ ಬಂದಿದ್ದ ಹಿನ್ನೆಲೆ ಸಿಎಂ ಸ್ಥಾನ ಅಲಂಕರಿಸಿದ್ದರು.