Breaking NewsLatest

ಯಡಿಯೂರಪ್ಪ ಪ್ರಬಲ ನಾಯಕ: ಬೊಮ್ಮಾಯಿ

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ , ಕರ್ನಾಟಕದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದಾರೆ. ಅವರೊಬ್ಬ ಪ್ರಬಲ ನಾಯಕ ಎಂದು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಶುಕ್ರವಾರ ನವದೆಹಲಿಯಲ್ಲಿ ನಡೆದ ಇಂಡಿಯಾ ಟುಡೇ ಕಾನ್ಕಲೇವ್ ನಲ್ಲಿ ಮಾತನಾಡಿದ ಅವರು, 2023ರ ಚುನಾವಣೆ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಮಾರ್ಗದರ್ಶನದಲ್ಲಿ ನನ್ನ ನೇತೃತ್ವದಲ್ಲಿ ನಡೆಯಲಿದೆ. ಎಷ್ಟು ಅವಧಿಗೆ ಮುಖ್ಯಮಂತ್ರಿಯಾಗಿರುತ್ತೇನೆ ಎಂಬುದು ಮುಖ್ಯವಲ್ಲ. ಈ ಅವಧಿಯಲ್ಲಿ ಏನು ಮಾಡುತ್ತೇನೆ ಎಂಬುದು ಮುಖ್ಯ ಎಂದರು.

ಸಿಕ್ಕಿರುವ ಈ ಅವಧಿಯಲ್ಲಿ ಉತ್ತಮ ಆಡಳಿತ ನೀಡುವುದರ ಜೊತೆಗೆ ಮತ್ತೊಂದು‌ ಅವಧಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇನೆ ಎಂದು ಸಿಎಂ ಬೊಮ್ಮಾಯಿ‌ ವಿಶ್ವಾಸ ವ್ಯಕ್ತಪಡಿಸಿದರು. ‌

ಭಾರತೀಯ ಜನತಾ ಪಕ್ಷ ಈಗ ಕರ್ನಾಟಕದಲ್ಲಿ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಅದು ಸಮಾಜದ ಎಲ್ಲ ವರ್ಗದವರಿಗೂ ತಲುಪಿ ಅವರ ಬೆಂಬಲವನ್ನು ಗಳಿಸಿರುವ ಪಕ್ಷವಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಉತ್ತರ ಕರ್ನಾಟಕ ಭಾಗದಿಂದ ಹಲವಾರು ಜನ ಲಿಂಗಾಯತ ಸಮುದಾಯದವರು ಭಾರತೀಯ ಜನತಾ ಪಕ್ಷದಿಂದ ಶಾಸಕರು ಮತ್ತು ಸಂಸದರಾಗಿದ್ದಾರೆ. ಆದರೆ ಒಂದು ಸರ್ಕಾರ ಅಧಿಕಾರಕ್ಕೆ ಬರಬೇಕೆಂದರೆ ಎಸ್ಸಿ, ಎಸ್ಟಿ, ಒಕ್ಕಲಿಗ, ಹಿಂದುಳಿದ ವರ್ಗದವರ ಬೆಂಬಲ‌ಬೇಕು. ಈ ವರ್ಗದವರು ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಿದ್ದಾರೆ. ಹೀಗಾಗಿ ಬಿಜೆಪಿ ಈಗ ಕರ್ನಾಟಕದಲ್ಲಿ ಸಮಾಜದ ಎಲ್ಲ ವರ್ಗದವರ ಪಕ್ಷವಾಗಿದೆ ಎಂದರು.

ನೀಟ್ ಪರೀಕ್ಷೆಗೆ ತಮಿಳುನಾಡು ವಿರೋಧ ಮಾಡುತ್ತಿರುವುದು ಸರಿಯಲ್ಲ ಎಂದು ಬೊಮ್ಮಾಯಿ ಹೇಳಿದರು.‌

Related Articles

Leave a Reply

Your email address will not be published. Required fields are marked *

Back to top button