Breaking NewsLatest

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ: ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬುಧವಾರ ಅವರು ವಿದ್ಯುತ್ ಉತ್ಪಾದನೆ, ಬೇಡಿಕೆ ಮತ್ತು ಕಲ್ಲಿದ್ದಲು ಪರಿಸ್ಥಿತಿ ಕುರಿತಂತೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವರನ್ನು ದೆಹಲಿಯಲ್ಲಿ ಭೇಟಿಯಾದ ನಂತರ 2 ರೇಕುಗಳು ಹೆಚ್ಚುವರಿಯಾಗಿ ಬರುತ್ತಿವೆ.10 ರೇಕುಗಳು ನಿತ್ಯ ಪೂರೈಕೆಯಾಗುತ್ತಿದ್ದು, 98863 ಮೆಟ್ರಿಕ್ ಟನ್ ದಾಸ್ತಾನು ಇದೆ ಎಂದರು.

ಸಿಂಗರೇಣಿ ಗಣಿಗಳಿಂದ ನಮಗೆ ಎರಡು ರೇಕುಗಳು ದೊರಕಲಿದ್ದು, ತೆಲಂಗಾಣ ಮುಖ್ಯಮಂತ್ರಿಗಳೊಡನೆ ಹಾಗೂ ಕೇಂದ್ರದ ಕಲ್ಲಿದ್ದಲು ಸಚಿವರೊಂದಿಗೆ ಸಹ ಮಾತನಾಡಿ ಒಟ್ಟು 12 ರೇಕುಗಳ ಪೂರೈಕೆಗೆ ಸಂಬಂಧಿಸಿದಂತೆ ಚರ್ಚಿಸಲಾಗಿದೆ ಎಂದರು.

ಎಸ್ಕಾಂಗಳ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಹಿಂದೆ ಸರ್ಕಾರ ಕೊಟ್ಟಿರುವ ಸಾಲವನ್ನು ಈಕ್ವಿಟಿಯಾಗಿ ಪರಿವರ್ತಿಸುವ ಪ್ರಸ್ತಾವನೆ ನಮ್ಮ ಮುಂದಿದ್ದು, ಅದರ ಬಗ್ಗೆಯೂ ಕ್ರಮ ಜರುಗಿಸಲಾಗುವುದು. ಎಸ್ಕಾಂ ಆರ್ಥಿಕವಾಗಿ ಸಬಲೀಕರಣಗೊಳ್ಳಲು ಆದಾಯ ಸಂಗ್ರಹಕ್ಕೆ ಆದ್ಯತೆ ನೀಡಿ , ಬಂಡವಾಳ ಹೂಡಿಕೆ ಪ್ರತ್ಯೇಕವಾಗಿ ಮಾಡಬೇಕು. ಹಣ ಪಾವತಿ ಬಾಕಿ ಉಳಿಸಿಕೊಳ್ಳಬಾರದು ಎಂದು ಸೂಚಿಸಿರುವುದಾಗಿ ತಿಳಿಸಿದರು.

ರಾಜ್ಯದಲ್ಲಿ ವಿದ್ಯುತ್ ಕಡಿತವಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಅಕ್ಟೊಬರ್ ನಲ್ಲಿ ನಿರಂತರವಾಗಿ ಮಳೆಯಾಗಿದ್ದು, 2-3 ಜಿಲ್ಲೆಗಳನ್ನು ಬಿಟ್ಟರೆ ಶೇ. 30 ರಿಂದ 50 ರಷ್ಟು ಹೆಚ್ಚುವರಿ ಮಳೆಯಾಗಿದೆ.
ಇದುವರೆಗೂ 21 ಜನ ಸಾವನ್ನಪ್ಪಿದ್ದಾರೆ. ಜೂನ್ ನಿಂದ ಇಲ್ಲಿಯವರೆಗೂ 4, 71,000 ಹೆಕ್ಟೇರ್ ಬೆಲೆ ಹಾನಿಯಾಗಿದೆ. 105 ಕೋಟಿ ರೂ.ಗಳ ಪರಿಹಾರವನ್ನು 1.17 ಲಕ್ಷ ರೈತರಿಗೆ ಬಿಡುಗಡೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳ ಪಿ.ಡಿ ಖಾತೆಯಲ್ಲಿ 738 ಕೋಟಿ ರೂ.ಗಳು ಲಭ್ಯವಿದೆ.
ಅಕ್ಟೊಬರ್ 1 ರಿಂದ 12 ರೊಳಗೆ ಮರಣ ಹೊಂದಿದ 21 ಜನರಿಗೆ ಕೂಡಲೇ ಪರಿಹಾರ ನೀಡಲು ಸೂಚನೆ ನೀಡಲಾಗಿದ್ದು, ಹಾಗೂ ಮಳೆಯಿಂದ ಹಾನಿಗೊಳಗಾದವರಿಗೆ 10,000 ರೂ.ಗಳ ಎಕ್ಸ್ ಗ್ರೇಶಿಯಾ ಮೊತ್ತವನ್ನು ನೀಡಲು ಸೂಚಿಸಲಾಗಿದೆ. ಭಾಗಶ: ಹಾನಿಗೊಳಗಾದ 2,500 ಮನೆಗಳಿಗೆ ಹಾಗೂ ಬೆಳೆ ಹಾನಿಗೂ ಕಳೆದ ವರ್ಷದಂತೆ ಎನ್.ಡಿ.ಆರ್.ಎಫ್ ನಿಯಮಾವಳಿಗಳಂತೆ ಪರಿಹಾರ ನೀಡಲು ಸೂಚಿಸಲಾಗಿದೆ.

2300 ವಿದ್ಯುತ್ ಕಂಬಗಳು ಬಿದ್ದಿದ್ದು, ರಸ್ತೆ, ಸೇತುವೆ, ಶಾಲಾ ಕಟ್ಟಡಗಳ ಹಾನಿಯನ್ನು ಮೌಲ್ಯಮಾಪನ ಮಾಡಿ ಪರಿಹಾರ ನೀಡಲು ಹಣ ಬಿಡುಗಡೆ ಸೂಚಿಸಲಾಗಿದೆ ಎಂದರು.

Related Articles

Leave a Reply

Your email address will not be published. Required fields are marked *

Back to top button