Breaking NewsLatest
ಸಿದ್ದರಾಮಯ್ಯ ಭೇಟಿಯಾಗಿಲ್ಲ; ಬಿಎಸ್ವೈ ಸ್ಪಷ್ಟನೆ
ಬೆಂಗಳೂರು: ಸಿದ್ದರಾಮಯ್ಯ ಅವರನ್ನು ತಮ್ಮ ಜನ್ಮದಿನದ ಸಂದರ್ಭ ಹೊರತುಪಡಿಸಿ ವೈಯಕ್ತಿಕವಾಗಿ ಭೇಟಿಯಾಗಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ರಾಜಕೀಯ ಲಾಭಕ್ಕಾಗಿ ಯಡಿಯೂರಪ್ಪ ಅವರನ್ನು ಸಿದ್ದರಾಮಯ್ಯ ಭೇಟಿಯಾಗಿದ್ದರೆಂದು ಎಚ್ಡಿ ಕುಮಾರಸ್ವಾಮಿ ಮಾಡಿದ ಆರೋಪಕ್ಕೆ ಪ್ರತಿಕ್ರಿಯೆಯಾಗಿ ಟ್ವೀಟ್ ಮೂಲಕ ಅವರು ಈ ಸ್ಪಷ್ಟನೆ ಕೊಟ್ಟಿದ್ದಾರೆ.
ನನಗೆ ಅಂಥ ಯಾವುದೇ ಅಗತ್ಯವಿಲ್ಲ, ಪಕ್ಷವನ್ನು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುವುದೇ ತಮ್ಮ ಗುರಿ ಎಂದು ಸ್ಪಷ್ಟಪಡಿಸುವ ಮೂಲಕ, ರಾಜಕೀಯ ವಲಯದಲ್ಲಿ ಎದ್ದಿರುವ ಊಹಾಪೋಹಗಳಿಗೆ ತೆರೆ ಎಳೆಯಲು ಅವರು ಯತ್ನಿಸಿದ್ದಾರೆ.
ಕುಮಾರಸ್ವಾಮಿ ಆರೋಪಕ್ಕೆ ಈಗಾಗಲೇ ಕಲಬುರ್ಗಿಯಲ್ಲಿ ಪ್ರತಿಕ್ರಿಯೆ ಕೊಟ್ಟಿರುವ ಸಿದ್ದರಾಮಯ್ಯ ಕೂಡ, ಭೇಟಿಯಾಗಿರುವುದನ್ನು ಸಾಬೀತುಪಡಿಸಿದರೆ ರಾಜಕೀಯ ಸನ್ಯಾಸ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.