Breaking NewsLatest

ಮನಗೂಳಿ ಪುತ್ರ ಕಾಂಗ್ರೆಸ್ ಸೇರಿದ್ದಕ್ಕೆ ಎಚ್​ಡಿಕೆಗೆ ನೋವು; ಡಿಕೆ ಶಿವಕುಮಾರ್ ವ್ಯಂಗ್ಯ

ಬೆಂಗಳೂರು: ಸಿಂದಗಿ ಕ್ಷೇತ್ರದಲ್ಲಿ ಅಶೋಕ್ ಮನಗೂಳಿ ಜೆಡಿಎಸ್ ಬದಲು, ಕಾಂಗ್ರೆಸ್ ಅಭ್ಯರ್ಥಿಯಾಗಿರುವುದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ನೋವು ತಂದಿದೆ. ಆ ನೋವಿನಲ್ಲಿ ಅವರು ಕಾಂಗ್ರೆಸ್ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಎಂ.ಸಿ.ಮನಗೊಳಿ ಅವರು ತಮ್ಮ ಮಗನನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವಂತೆ ಮನವಿ ಮಾಡಿದ್ದರು ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆ ಅಪ್ಪಟ ಸುಳ್ಳು ಎಂದು ಕುಮಾರಸ್ವಾಮಿ ಶನಿವಾರ ಸರಣಿ ಟ್ವಿಟ್ ಮಾಡಿ ತಮ್ಮ ಆಕ್ಷೇಪ ವ್ಯಕ್ತಪಡಿಸಿದ್ದರು.

ನಾನು ಸಮಯ, ದಿನ ನೋಡಿಕೊಂಡು ಹೇಳಿಕೆ ಕೊಟ್ಟಿಲ್ಲ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಈ ಬಗ್ಗೆ ಮಾತನಾಡಿದ್ದಾರೆ. ದಿವಂಗತ ಮನಗೂಳಿ ಮತ್ತು ಅವರ ಪುತ್ರ ಅಶೋಕ್ ಮನಗೂಳಿ ತಮ್ಮ ಬಳಿ ಏನು ಮಾತನಾಡಿದರು ಎಂಬುದು ದಿವಗಂತ ಮನಗೂಳಿ ಹಾಗೂ ಅವರ ಪುತ್ರ ಅಶೋಕ್ ಮನಗೂಳಿ ಅವರಿಗೆ ಗೊತ್ತು ಎಂದು ಶಿವಕುಮಾರ್ ಹೇಳಿದರು.

ಈಗ ಅಶೋಕ್ ಮನಗೂಳಿ ನಮ್ಮ ಪಕ್ಷದ ಅಭ್ಯರ್ಥಿ. ನಾನು ಬಹಿರಂಗವಾಗಿಯೇ ಮಾತನಾಡಿದ್ದೇನೆ. ಗೌಪ್ಯವಾಗೇನು ಮಾತನಾಡಿಲ್ಲ. ಈ ಬಗ್ಗೆ ನಾವು ಸುಳ್ಳು ಹೇಳುವ ಅವಶ್ಯಕತೆಯೂ ಇಲ್ಲ. ಇಲ್ಲದಿರುವುದನ್ನು ಸೃಷ್ಟಿಸಿಯೂ ಇಲ್ಲ ಎಂದು ಶಿವಕುಮಾರ್ ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಪಕ್ಷ ಯಾರನ್ನೂ ಹೈಜಾಕ್ ಮಾಡಿಲ್ಲ. ತಾವಾಗಿಯೇ ಪಕ್ಷ ಸೇರ್ಪಡೆಯಾದವರನ್ನು ನಾವು ನಿರಾಕರಿಸಿಲ್ಲ. ರಾಜಕಾರಣ ನಿಂತ ನೀರಲ್ಲ ಎಂಬುದನ್ನು ಕುಮಾರಸ್ವಾಮಿ ಅವರೇ ಹೇಳಿದ್ದಾರೆ ಎಂದರು.

Related Articles

Leave a Reply

Your email address will not be published. Required fields are marked *

Back to top button