Breaking News

ಇಂದು ಚನ್ನಪಟ್ಟಣಕ್ಕೆ ಹೆಚ್​ಡಿಕೆ ಭೇಟಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಚನ್ನಪಟ್ಟಣ ಕ್ಷೇತ್ರದ ಶಾಸಕ ಹೆಚ್.ಡಿ.ಕುಮಾರಸ್ವಾಮಿ ಶನಿವಾರ ಸ್ವಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ಅವರು ಪಟ್ಟಣದ ವಾರ್ಡ್ 10ರಲ್ಲಿ ಪೈಪ್ ಲೈನ್ ಹಾಗೂ ಮತ್ತಿತರೆ ಸಮಸ್ಯೆಗಳನ್ನು ಪರಿಶೀಲನೆ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಅದಕ್ಕೂ ಮೊದಲು ಕುಮಾರಸ್ವಾಮಿ, ತಾಲೂಕಿನ ಅರಾಳಾಳುಸಂದ್ರಕ್ಕೆ ಭೇಟಿ ನೀಡಿ ಅಲ್ಲಿ ನೂತನವಾಗಿ ಸಿರ್ಮಿಸಲಿರುವ ಪಬ್ಲಿಕ್ ಶಾಲೆ ಕಾಮಗಾರಿಯ ಭೂಮಿಪೂಜೆ ನೆರವೇರಿಸಲಿದ್ದಾರೆ.

ಅದಾದ ಮೇಲೆ ಚಿಕ್ಕಮಳೂರು ಗ್ರಾಮದ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯವನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Related Articles

Leave a Reply

Your email address will not be published.

Back to top button