Breaking NewsLatest

ಜಮ್ಮು-ಕಾಶ್ಮೀರದಲ್ಲಿ ಉಗ್ರರ ನಡುವಿನ ಗುಂಡಿನ ಚಕಮಕಿ: ಐವರು ಯೋಧರು ಹುತಾತ್ಮ

ಜಮ್ಮು-ಕಾಶ್ಮೀರ : ಪೂಂಚ್ ಜಿಲ್ಲೆಯಲ್ಲಿ ಉಗ್ರರು ಮತ್ತು ಭಾರತೀಯ ಸೇನೆ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಐವರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ.

ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆಯಲ್ಲಿ ಕಿರಿಯ ನಿಯೋಜಿತ ಅಧಿಕಾರಿ (ಜೆಸಿಒ) ಸೇರಿ ಐವರು ಯೋಧರು ಹುತಾತ್ಮರಾಗಿದ್ದಾರೆ. ಇಂದು ಮತ್ತೆ ಜಮ್ಮು-ಕಾಶ್ಮೀರದಲ್ಲಿ ಗುಂಡಿನ ದಾಳಿ ಮುಂದುವರೆದಿದೆ.

ಇಂದು ಬೆಳಗ್ಗೆಯಿಂದಲೂ ಕೂಡ ಉಗ್ರ ವಿರುದ್ದ ಕಾರ್ಯಚರಣೆಯನ್ನು ನಡೆಸಲಾಗುತ್ತಿದ್ದು, ಇದೇ ವೇಳೆ ಕಾರ್ಯಚರಣೆಯಲ್ಲಿ ಭಾರತದ ಯೋಧರ ಗುಂಡಿಗೆ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು, ಬಾಕಿ ಉಳಿದಿರುವ ಉಗ್ರರದನ್ನು ಹೊಡೆದುರುಳಿಸಲು ಭಾರತೀಯ ಯೋಧರು ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ.

ಇದಕ್ಕೂ ಮುನ್ನ ಅನಂತ್ ನಾಗ್ ಮತ್ತು ಬಂಡಿಪೋರಾ ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿರುವುದಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದರು.

ಸಾವನ್ನಪ್ಪಿರುವ ಉಗ್ರರನ್ನು ಲಷ್ಕರ್ ಎ ತೊಯ್ಬಾದ ಜತೆ ನಂಟು ಹೊಂದಿದ್ದ ಇಮ್ತಿಯಾಜ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದ್ದು, ಈತ ಕಣಿವೆ ಪ್ರದೇಶದಲ್ಲಿ ನಾಗರಿಕರನ್ನು ಹತ್ಯೆಗೈದ ಘಟನೆಯಲ್ಲಿ ಶಾಮೀಲಾಗಿದ್ದ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರು.

ಅನಂತ್ ನಾಗ್ ಜಿಲ್ಲೆಯ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದ ಪರಿಣಾಮ ಯೋಧರು ಪ್ರತಿದಾಳಿ ನಡೆಸಿದಾಗ ಉಗ್ರ ಸಾವನ್ನಪ್ಪಿದ್ದ. ಆತನ ಬಳಿ ಇದ್ದ ಪಿಸ್ತೂಲ್, ಗ್ರೆನೇಡ್ ವಶಕ್ಕೆ ತೆಗೆದುಕೊಂಡಿರುವುದಾಗಿ ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.

Related Articles

Leave a Reply

Your email address will not be published.

Back to top button