Breaking NewsLatest
ಕನ್ನಡ ರಾಜ್ಯೋತ್ಸವ: ತಾಯಿ ಭುವನೇಶ್ವರಿಗೆ ಸಿಎಂ ಪುಷ್ಪನಮನ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ಇವರ ವತಿಯಿಂದ ಆಯೋಜಿಸಿದ್ದ 66 ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿದರು.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ್, ಶಾಸಕ ರಿಜ್ವಾನ್ ಆರ್ಷದ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ , ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಉಪಸ್ಥಿತರಿದ್ದರು.