Breaking NewsLatestಸಿನಿಮಾ
ನಟ ಪುನೀತ್ಗೆ ಕರ್ನಾಟಕ ರತ್ನ: ಪ್ರಮುಖರ ಜೊತೆ ಚರ್ಚಿಸಿ ತೀರ್ಮಾನ: ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಸ್ಯಾಂಡಲ್ವುಡ್ ನಟ ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಗೌರವ ನೀಡುವ ಕುರಿತು ಪ್ರಮುಖರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳು ಸೇರಿದಂತೆ ಹಲವೆಡೆ ನಟ ಪುನೀತ್ ರಾಜ್ಕುಮಾರ್ ಅವರಿಗೆ ಕರ್ನಾಟಕ ರತ್ನ ಗೌರವ ನೀಡುವ ಬೇಡಿಕೆ ಕುರಿತ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಹಾನಗಲ್ ಹಾಗೂ ಸಿಂಧಗಿ ಕ್ಷೇತ್ರಗಳೆರಡಲ್ಲೂ ಬಿಜೆಪಿ ಜಯಗಳಿಸುವ ವಿಶ್ವಾಸ ವ್ಯಕ್ತಪಡಿಸಿದರು. ಸಂಭವನೀಯ ಕೊರೋನಾ ಮೂರನೇ ಅಲೆ ಸಂಬಂಧ ಸರ್ಕಾರ ಈಗಾಗಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಈ ಸಂಬಂಧ ತಜ್ಞರೊಂದಿಗೆ ಮತ್ತೆ ಚರ್ಚಿಸಲಾಗುವುದು. ಸದ್ಯಕ್ಕೆ ಯಾವುದೇ ಆತಂಕ ಇಲ್ಲ ಎಂದೂ ಸಿಎಂ ಹೇಳಿದರು.