Night Curfew: ಕೊರೊನಾ ಇಳಿಕೆ : ನೈಟ್ ಕರ್ಪ್ಯೂ ಹಿಂಪಡೆದ ರಾಜ್ಯ ಸರ್ಕಾರ
ಬೆಂಗಳೂರು : ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ, ನೈಟ್ ಕರ್ಫ್ಯೂನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗಿತ್ತು. ಆದರೆ ಇದೀಗ ಕೊರೊನಾ ತೀವ್ರತೆ ಕಡಿಮೆಯಾದ ಹಿನ್ನೆಲೆ ರಾಜ್ಯ ಸರ್ಕಾರ ಈ ಆದೇಶವನ್ನು ಹೊರಡಿಸಿದೆ.
ರಾಜ್ಯದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಕಳೆದ ಅಕ್ಟೋಬರ್ 25ಕ್ಕೆ ನೈಟ್ ಕರ್ಫ್ಯೂಗೆ ಸಂಬಂಧಿಸಿ ಪರಿಷ್ಕೃತ ಆದೇಶ ಹೊರಡಿಸಲಾಗಿತ್ತು. ಈ ಸಂಬಂಧ ಸಾರ್ವಜನಿಕ ವಲಯದಲ್ಲಿ ತೀರ್ವ ಅಸಮಾಧಾನ ವ್ಯಕ್ತವಾಗಿತ್ತು.
ರಾಜ್ಯದಲ್ಲಿ ಕೊರೊನಾ ಪಸರಿಸುವ ಪ್ರಮಾಣ ಕಡಿಮೆ ಆಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಒಂದೊಂದೆ ವಲಯಗಳಿಗೆ ವಿನಾಯ್ತಿ ನೀಡುತ್ತಿದೆ, ಕಳೆದ ಎರಡ್ಮೂರು ತಿಂಗಳಿನಿಂದ ನೈಟ್ ಕರ್ಫ್ಯೂ ತೆರವುಗೊಳಿಸಬೇಕೆಂದು ವ್ಯಾಪಾರಸ್ಥರು ಮನವಿ ಮಾಡಿಕೊಂಡಿದ್ದರು. ಇದೀಗ ವ್ಯಾಪಾರಿಗಳು ಮನವಿಯನ್ನು ಸಮ್ಮತಿಸಿರುವ ರಾತ್ರಿ ಕರ್ಫ್ಯೂ ರದ್ದು ಮಾಡಿದೆ.
ಅಕ್ಟೋಬರ್ ನಲ್ಲಿ ಪ್ರಾಥಮಿಕ ಶಾಲೆ ಆರಂಭಕ್ಕೆ ಅನುಮತಿ ನೀಡಿದ್ದ ರಾಜ್ಯ ಸರ್ಕಾರ ನಿನ್ನೆ ಎಲ್ಕೆಜಿ ಮತ್ತು ಯುಕೆಜಿ ಭೌತಿಕ ತರಗತಿ ನಡೆಸಲು ಅನುಮತಿ ನೀಡಿದೆ. ಶಾಲೆ ಆರಂಭಕ್ಕೆ ಹಲವು ಮಾರ್ಗಸೂಚಿಗಳನ್ನು ಸರ್ಕಾರ ಪ್ರಕಟಿಸಿದೆ. ಜೊತೆಗೆ ಕಡ್ಡಾಯವಾಗಿ ಪೋಷಕರು ಮತ್ತು ಶಿಕ್ಷಕರು ಎರಡೂ ಡೋಸ್ ಕೊರೊನಾ ಲಸಿಕೆ ಪಡೆದಿರಬೇಕೆಂಬ ಷರತ್ತು ವಿಧಿಸಿದೆ.
ಕುದುರೆ ರೇಸ್ಗೆ ಅನುಮತಿ
ಈ ನಡುವೆ ಕೋವಿಡ್ ನಿಯಮಗಳ ಪಾಲನೆಯೊಂದಿಗೆ ರಾಜ್ಯದಲ್ಲಿ ಕುದುರೆ ರೇಸ್ ಗೆ ಸರ್ಕಾರ ಅನುಮತಿ ನೀಡಿದೆ. ಕೋವಿಡ್ ನಿಯಮಗಳ ಕಟ್ಟುನಿಟ್ಟಿನ ಪಾಲನೆಯೊಂದಿಗೆ ಕಡ್ಡಾಯವಾಗಿ ಕೋವಿಡ್ ಲಸಿಕೆಯ ಎರಡು ಡೋಸ್ ಪಡೆದವರು ಕುದುರೆ ರೇಸ್ ನಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬಹುದಾಗಿದೆ.