Breaking NewsLatest

ಲಖೀಂಪುರ್ ಖೇರಿ ಹಿಂಸಾಚಾರ: ಸ್ಥಳಕ್ಕೆ ಭೇಟಿ ನೀಡಲು ಮುಂದಾದ ಪ್ರಿಯಾಂಕಾ ಗಾಂಧಿ ಬಂಧನ

ಲಕ್ನೋ: ಲಖಿಂಪುರ್ ಕೇರಿಯಲ್ಲಿ ರೈತ ಹೋರಾಟದ ವೇಳೆ ನಡೆದ ಹಿಂಸಾಚಾರಕ್ಕೆ ಬಲಿಯಾದವರ ಕುಟುಂಬಸ್ಥರನ್ನು ಭೇಟಿಯಾಗಲು ಪ್ರಯಾಣಿಸುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಸೋಮವಾರ ಹರ್ಗಾಂವ್ ನಲ್ಲಿ ಬಂಧಿಸಲಾಗಿದೆ.

ಉತ್ತರಪ್ರದೇಶದ ಲಖೀಂಪುರದಲ್ಲಿ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಭೇಟಿ ವಿರುದ್ಧ ನಡೆದ ರೈತರ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದು ನಾಲ್ವರು ರೈತರು ಸೇರಿ 8 ಜನರು ಮೃತಪಟ್ಟಿದ್ದರು. ರೈತರ ಕುಟುಂಬಕ್ಕೆ ಸಾಂತ್ವನ ಹೇಳಲೆಂದು ಪ್ರಿಯಾಂಕಾ ಗಾಂಧಿ ತೆರಳುತ್ತಿದ್ದರು. ಈ ವೇಳೆ ಹರ್ಗಾಂವ್ ನಲ್ಲಿ ಪ್ರಿಯಾಂಕಾ ಗಾಂಧಿಯವರನ್ನು ಪೊಲೀಸರು ತಡೆದಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಆದರೆ ಪ್ರಿಯಾಂಕಾ ಗಾಂಧಿ ಹಾಗೂ ಹಲವು ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಮಾಹಿತಿ ನೀಡಿದ್ದು, ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ರೈತ ಕುಟುಂಬವನ್ನು ಭೇಟಿಯಾಗಲು ಪೊಲೀಸರು ಬಿಡಲಿಲ್ಲ. ರೈತರ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಲ್ಲಿ ಬಲಿಯಾದ ಸಂತ್ರಸ್ತರನ್ನು ಭೇಟಿಯಾಗಲು ಕೇಂದ್ರ ಸರ್ಕಾರ ಅವಕಾಶ ನೀಡುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

Related Articles

Leave a Reply

Your email address will not be published.

Back to top button