Breaking NewsLatest
ಬಂಗಾಳದಲ್ಲಿ ಬಿಜೆಪಿಗೆ ಮುಖಭಂಗ; ಟಿಎಂಸಿ ಗೆಲುವನ್ನು ಜನತೆಯ ಜಯ ಎಂದ ಮಮತಾ
ಕೋಲ್ಕತ್ತಾ: ಪಶ್ಚಿಮ ಬಂಗಾಳ ಉಪಚುನಾವಣೆಯಲ್ಲಿ ಬಿಜೆಪಿ ಭಾರೀ ಮುಖಭಂಗವಾಗಿದೆ. ಎಲ್ಲ ನಾಲ್ಕು ಸ್ಥಾನಗಳನ್ನೂ ತೃಣಮೂಲ ಕಾಂಗ್ರೆಸ್ ಗೆದ್ದುಕೊಂಡಿದೆ.
ಬಿಜೆಪಿಯ ಹಿಡಿತದಲ್ಲಿದ್ದ ದಿನ್ಹಾತಾ ವಿಧಾನಸಭಾ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿ ಉದಯನ್ ಗುಹಾ 1,63,005 ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಅದೇ ರೀತಿ ಗೋಸಾಬ ವಿಧಾನಸಭಾ ಕ್ಷೇತ್ರದಲ್ಲಿ ಸುಬ್ರತಾ ಮೊಂಡಲ್ 1,43,051 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. 93,832 ಮತಗಳ ಭಾರೀ ಅಂತರದಿಂದ ಖರ್ದಾ ವಿಧಾನಸಭಾ ಕ್ಷೇತ್ರವನ್ನು ಕೂಡ ಟಿಎಂಸಿ ತನ್ನದಾಗಿಯೇ ಉಳಿಸಿಕೊಂಡಿದೆ.
ಮೂರು ಕ್ಷೇತ್ರಗಳಲ್ಲಿ ಬಿಜೆಪಿಗೆ ಠೇವಣಿಯನ್ನೂ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಟಿಎಂಸಿ ಗೆಲುವನ್ನು ಜನತೆಯ ಗೆಲುವು ಎಂದು ಬಣ್ಣಿಸಿದ್ದಾರೆ.