Breaking NewsLatestಸಿನಿಮಾ
ನಟ ಪುನೀತ್ ರಾಜ್ ಕುಮಾರ್ ಅಸ್ವಸ್ಥ: ಖಾಸಗಿ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿತಿ ಗಂಭೀರ
ಬೆಂಗಳೂರು : ನಟ ಪುನೀತ್ ರಾಜ್ಕುಮಾರ್ ಅವರ ಆರೋಗ್ಯದಲ್ಲಿ ಇಂದು ಏರುಪೇರು ಉಂಟಾಗಿದೆ. ಕೂಡಲೇ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡುತ್ತಿದ್ದಾರೆ.
ಬೆಳಗ್ಗೆ ಜಿಮ್ನಲ್ಲಿ ವರ್ಕೌಟ್ ಮಾಡುವಾಗ ಪುನೀತ್ ರಾಜ್ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.
ಪುನೀತ್ ರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ವಿಚಾರ ತಿಳಿದ ತಕ್ಷಣ ನಟ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಅವರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ವಿಕ್ರಂ ಆಸ್ಪತ್ರೆ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದಾರೆ. ನಟ ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಗಳ ದಂಡೇ ಆಸ್ಪತ್ರೆಗೆ ಹರಿದು ಬರುತ್ತಿದೆ.