Breaking NewsLatest

ಲಖೀಂಪುರ ರೈತರ ಹತ್ಯೆ ಪ್ರಕರಣ ಖಂಡಿಸಿ ರಾಮನಗರದಲ್ಲಿ ಪಂಜಿನ ಮೆರವಣಿಗೆ

ರಾಮನಗರ: ಉತ್ತರಪ್ರದೇಶದ ಲಖೀಂಪುರದಲ್ಲಿನ ರೈತರ ಹತ್ಯೆ ಪ್ರಕರಣ ಖಂಡಿಸಿ ರಾಮನಗರದಲ್ಲಿ ನೂರಾರು ಜನ ಕಾಂಗ್ರೆಸ್ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ನ ಹಿರಿಯ ನಾಯಕ, ವಿಧಾನಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ನೇತ್ಱತ್ವದಲ್ಲಿ ಹೋರಾಟ ನಡೆಯಿತು. ನಗರದ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಿಂದ ಚಾಲನೆ ನೀಡಿ ರಾಮನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು.

ಇದೇ ವೇಳೆ ಉತ್ತರಪ್ರದೇಶ ಸಿಎಂ ಯೋಗಿಆದಿತ್ಯನಾಥ್ ವಿರುದ್ಧ ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧವೂ ಘೋಷಣೆ ಕೂಗಿದರು. ರಾಮನಗರ ಜಿಲ್ಲಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು, ಜೊತೆಗೆ ಪಕ್ಷದ ಪ್ರಮುಖ ಮುಖಂಡರು ಹಾಗೂ ಮಹಿಳೆಯರು ಸಹ ಪಂಜು ಹಿಡಿದು ಹೋರಾಟ ನಡೆಸಿದರು.

ಈ ಸಂದರ್ಭದಲ್ಲಿ ಸಿ.ಎಂ.ಲಿಂಗಪ್ಪ ಮಾತನಾಡಿ ಉತ್ತರಪ್ರದೇಶ ಸರ್ಕಾರ ಜನವಿರೋಧಿ ಸರ್ಕಾರ, ಅಲ್ಲಿನ ಬಿಜೆಪಿ ನಾಯಕರು ಅಫ್ಘಾನಿಸ್ತಾನದ ತಾಲಿಬಾನ್ ರೀತಿ ವರ್ತನೆ ಮಾಡ್ತಿದ್ದಾರೆ. ರೈತರ ಸಾವಿನ ಬಗ್ಗೆ ಪ್ರಧಾನಿಗಳು ಸಹ ಸಾಂತ್ವನದ ಮಾತನಾಡಿಲ್ಲ. ಅವರಿಗೆ ಕೇವಲ ಅವರ ಸರ್ಕಾರ ಉಳಿಯಬೇಕಷ್ಟೇ. ಮುಂದೆ ಇನ್ನು ಉಗ್ರಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್, ಜಿ.ಪಂ. ಮಾಜಿ ಅಧ್ಯಕ್ಷ ಇಕ್ಬಾಲ್ ಹುಸೇನ್, ಮಾಜಿ ಸದಸ್ಯ ರಾಜು ಮುಂತಾದವರಿದ್ದರು.

Related Articles

Leave a Reply

Your email address will not be published.

Back to top button