Breaking NewsLatest
ಕ್ಷಮಾದಾನ ಕೋರಿ ಬ್ರಿಟಿಷರಿಗೆ ಅರ್ಜಿ ಸಲ್ಲಿಸುವಂತೆ ಸಾವರ್ಕರ್ಗೆ ಹೇಳಿದ್ದು ಗಾಂಧೀಜಿ: ರಾಜನಾಥ್ ಸಿಂಗ್
ನವದೆಹಲಿ: ಸಾರ್ವಕರ್ ಅಂಡಮಾನ್ ಜೈಲಿನಲ್ಲಿದ್ದಾಗ ಕ್ಷಮಾದಾನ ಕೋರಿ ಬ್ರಿಟಿಷರಿಗೆ ಅರ್ಜಿ ಸಲ್ಲಿಸುವಂತೆ ಸಾವರ್ಕರ್ಗೆ ಹೇಳಿದ್ದು ಮಹಾತ್ಮ ಗಾಂಧಿಜಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೊಂಡಿದ್ದಾರೆ.
ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಸಾರ್ವಕರ್ ಕುರಿತಾದ ಪುಸ್ತಕವೊಂದರ ಬಿಡುಗಡೆಯ ಕಾರ್ಯಕ್ರಮದಲ್ಲಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಾವರ್ಕರ್ಗೆ ಬ್ರಿಟಿಷರ ಮುಂದೆ ಕ್ಷಮಾದಾನ ಅರ್ಜಿ ಸಲ್ಲಿಸಲು ಹೇಳಿದ್ದು ಗಾಂಧೀಜಿ. ಆದರೆ ಸಾವರ್ಕರ್ನ್ನು ಸೈದ್ದಾಂತಿಕ ಕಾರಣಗಳಿಂದ ಕೆಲವರು ನಿಂದಿಸುತ್ತಾರೆ. ಮುಂದೆ ಇದನ್ನು ಸಹಿಸಲಾಗದು ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ಸಾರ್ವಕರ್ ಕುರಿತಾಗಿ, ಉದಯ್ ಮಹೂರ್ಕರ್ ಮತ್ತು ಚಿರಾಯು ಪಂಡಿತ್ ಎಂಬುವವರು ಬರೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ರಕ್ಷಣಾ ಸಚಿವರು ಮಾತನಾಡಿದರು.