Breaking NewsLatest
100ನೇ ಜಯದೊಂದಿಗೆ ಪ್ಲೇ ಆಫ್ ತಲುಪಿದ ಆರ್ಸಿಬಿ
ದುಬೈ: ಶ್ರೀಕರ್ ಭರತ್ (78) ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ (51) ಅವರ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಜಯ ಗಳಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಅತ್ಯಂತ ಗೌರವದೊಂದಿಗೆ ಪ್ಲೇ ಆಫ್ ತಲುಪಿದೆ.
ಎಲಿಮಿನೇಟರ್ ಪಂದ್ಯದಲ್ಲಿ ಆರ್ಸಿಬಿ ಕೊಲ್ಕೊತಾ ನೈಟ್ ರೈಡರ್ಸ್ ವಿರುದ್ಧ ಆಡಲಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಿ 5 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತ್ತು. ಶ್ರೀಕರ್ ಭರತ್ ಕೊನೆಯ ಓವರ್ ನ ಕೊನೆಯ ಎಸೆತದಲ್ಲಿ ಸಿಕ್ಸರ್ ಸಿಡಿಸಿ ತಂಡಕ್ಕೆ ಜಯ ತಂದುಕೊಟ್ಟರು.
ಭರತ್ 52 ಎಸೆತಗಳನ್ನು ಎದುರಿಸಿ 3 ಬೌಂಡಿ ಹಾಗೂ 4 ಸಿಕ್ಸರ್ ನೆರವಿನಿಂದ ಅಜೇಯ 78 ರನ್ ಸಿಡಿಸಿ ಆರ್ಸಿಬಿಯ 100ನೇ ಜಯವನ್ನು ಅವಿಸ್ಮರಣೀಯಗೊಳಿಸಿದರಲ್ಲದೆ, ಪಂದ್ಯಶ್ರೇಷ್ಠ ಗೌರವಕ್ಕೂ ಪಾತ್ರರಾದರು.