Breaking NewsLatest

ಮುಜರಾಯಿ ಇಲಾಖೆ ಅರ್ಚಕರು ಸೇರಿದಂತೆ ನೌಕರರಿಗೆ 6ನೇ ವೇತನ ಜಾರಿ: ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರಿಗೆ ಮುಜರಾಯಿ ಇಲಾಖೆ ಸಚಿವರು ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ.
ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ 6 ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಜಾರಿಗೆ ಆದೇಶಿಸಿದ್ದಾರೆ
.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಜರಾಯಿ ಹಜ್ ಮತ್ತು ವಕ್ಪ್ ‌ ಸಚಿವರಾದ ಶಶಿಕಲಾ ಜೊಲ್ಲೆ, ಮುಜರಾಯಿಇಲಾಖೆಯವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜೆಸಲ್ಲಿಸುವ ಅರ್ಚಕರು ಹಾಗೂ ದೇವಾಲಯ ನೌಕರರು ಆರೋಗ್ಯ ಸಮಸ್ಯೆಗೆ ಒಳಗಾದರೆ ಅವರಿಗೆ ರಕ್ಷಣೆ ಒದಗಿಸಲು ಅರ್ಚಕರು ಹಾಗೂ ಇಲಾಖೆ ನೌಕರರಿಗೆ ವಿಮೆ ಯೋಜನೆ ಜಾರಿಗೊಳಿಸಲು ತೀರ್ಮಾನಿಸಲಾಗಿದೆ. ಇದರಿಂದ ಮುಜರಾಯಿ ಇಲಾಖೆಯ ಸುಮಾರು 37 ಸಾವಿರ ಸಿಬ್ಬಂದಿಗೆ ಪ್ರಯೋಜನವಾಗಲಿದೆ ಎಂದು ತಿಳಿಸಿದರು.

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಧಾರ್ಮಿಕ ಸಂಸ್ಥೆಗಳಲ್ಲಿ ಈಗಾಗಲೇ 5ನೇವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಪಡೆದು ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಹಾಗೂ ಅರ್ಚಕರಿಗೆ 6ನೇವೇತನ ಆಯೋಗದ ವೇತನ ದೊರಕಿಸಿಕೊಡುವಂತೆ ಅರ್ಚಕರಿಂದ ಬಹಳ ದಿನಗಳಿಂದ ಬೇಡಿಕೆ ಇತ್ತು. ಕೆಲವು ಷರತ್ತುಗಳನ್ನು ವಿಧಿಸಿ, ದೇವಾಲಯದ ವಾರ್ಷಿಕ ಆದಾಯದಲ್ಲಿ ನೌಕರರ ವೇತನ ಶೇ35ರಷ್ಟು ಮೀರದಂತೆ ನೌಕರರನ್ನು 6ನೇ ವೇತನ ಆಯೋಗದ ವ್ಯಾಪ್ತಿಗೆ ಒಳಪಡಿಸಲು ನಿರ್ಧರಿಸಲಾಗಿದೆ. ಎಂದರು.

ಇದರಿಂದ ಮುಜರಾಯಿ ಇಲಾಖೆಯ ಸುಮಾರು 1034 ಸಿಬ್ಬಂದಿಗೆ ಪ್ರಯೋಜನವಾಗಲಿದೆ. ಇದಕ್ಕೆ 20 ಕೋಟಿ ರೂ. ವೆಚ್ಚವಾಗಲಿದ್ದು, ಆಯಾ ದೇವಸ್ಥಾನಗಳ ನಿಧಿಯಿಂದ ಒದಗಿಸಲಾಗುವುದು. ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆಯಾಗುವುದಿಲ್ಲ. ಸಿ ದರ್ಜೆಯ ಬಹುತೇಕ ದೇವಸ್ಥಾನಗಳಲ್ಲಿ ಕಾಯಂ ಅರ್ಚಕರು ಇರುವುದಿಲ್ಲ. ಈ ಬಗ್ಗೆ ಎಲ್ಲ ದೇವಸ್ಥಾಗಳಿಂದ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು

ಎಲ್ಲ ದೇವಸ್ಥಾನಗಳಿಗೆ ತಸ್ತಿಕ ಹಣ 19.ಕೋಟಿ ರೂ. ಬಾಕಿ ಇದ್ದು ಶೀಘ್ರವೇ ಹಣ ಬಿಡುಗಡೆ ಮಾಡಲಾಗುವುದು. ಇನ್ನು ಮುಜರಾಯಿಇಲಾಖೆ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲ ದೇವಸ್ಥಾನಗಳಆಸ್ತಿ ಮಾರ್ಗನಕ್ಷೆ, ಅಲ್ಲಿನ ಸೇವೆಗಳ ಸಂಪೂರ್ಣ ಮಾಹಿತಿಯನ್ನು ಆನ್‌ಲೈನ್‌ ಮೂಲಕ ತಿಳಿದುಕೊಳ್ಳುವಂತೆ ಐಟಿಎಂಎಸ್ (ಇಂಟಿಗ್ರೆಟೆಡ್ ಡೆವೆಲಪ್ ಮೆಂಟ್ ಮ್ಯಾನೇಜ್ ಮೆಂಟ್ ಸಿಸ್ಟಮ್) ಜಾರಿಗೆ ತೀರ್ಮಾನಿಸಲಾಗಿದೆ ಎಂದರು.

ಇದೊಂದು ವಿನೂತನ ಯೋಜನೆಯಾಗಿದ್ದು, ರಾಜ್ಯದಲ್ಲಿ ಇದನ್ನು ಮೊದಲ ಬಾರಿಗೆ ಜಾರಿಗೆ ತರಲಾಗುತ್ತಿದೆ. ಇದರಿಂದ ರಾಜ್ಯದ ದೇವಾಲಯಗಳ ಮಾಹಿತಿ ಒಂದೆಡೆ ದೊರೆಯುವುದರಿಂದ ದೇಶ-ವಿದೇಶಗಳಿಂದ ಬರುವ ಭಕ್ತಾಧಿಗಳಿಗೆ ಅನುಕೂಲವಾಗಲಿದೆ. ದೇವಾಲಯಗಳ ಆದಾಯ ವೃದ್ಧಿಗೂ ಇದು ಪೂರಕವಾಗಲಿದೆ ಎಂದು ವಿವರಿಸಿದರು.

ವಿಜಯದಶಮಿ ದಿನ ವಿಶೇಷ ಪೂಜೆ:

ವಿಶ್ವದಲ್ಲಿ ಕೊರೊನಾ ಎರಡು ಅಲೆಗಳಿಂದ ಸಾಕಷ್ಟು ಜನರ ಜೀವ ಹಾನಿಯಾಗಿದೆ. ಈಗ ಮೂರನೆ ಅಲೆ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ನಾವು ನಮ್ಮ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲ ವರ್ಗದ ದೇವಸ್ಥಾನಗಳಲ್ಲಿ ವಿಜಯದಶಮಿ ಹಬ್ಬದ ಪ್ರಯುಕ್ತ ಅ.15 ರಂದು ಎಲ್ಲ ಜನರು ಹಾಗೂ ಮಕ್ಕಳ ಆರೋಗ್ಯ ರಕ್ಷಣೆಗಾಗಿ ಪ್ರಾರ್ಥಿಸಲು ವಿಶೇಷ ಪೂಜೆ ಸಲ್ಲಿಸಲು ಸುತ್ತೋಲೆ ಹೊರಡಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಇದೇ ವೇಳೆ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳ ಪ್ರವೇಶಕ್ಕೆ ಡ್ರೆಸ್ ಕೋಡ್ ಮಾಡುವ ಬಗ್ಗೆ ನನ್ನ ಮುಂದೆ ಯಾವುದೆ ಪ್ರಸ್ತಾವನೆ ಇಲ್ಲ. ಧಾರ್ಮಿಕ ಪರಿಷತ್ ನಲ್ಲಿ ಚರ್ಚೆಯಾಗಿದ್ದರೆ ಮಾಹಿತಿ ಪಡೆದು ಪರಿಶೀಲನೆ ಮಾಡಲಾಗುವುದು ಎಂದರು.

Related Articles

Leave a Reply

Your email address will not be published. Required fields are marked *

Back to top button