Breaking News

ಗತಿ ಶಕ್ತಿ ಯೋಜನೆಯಿಂದ ಸ್ಥಳೀಯ ಉತ್ಪಾದಕರಿಗೆ ಜಾಗತಿಕ ಮಟ್ಟದಲ್ಲಿ ಮಾರುಕಟ್ಟೆ: ವಿ.ಸೋಮಣ್ಣ

ಬೆಂಗಳೂರು: ಸಮಗ್ರ ಮೂಲಸೌಕರ್ಯಕ್ಕೆ ಅಡಿಪಾಯವಾಗಲಿರುವ 100 ಲಕ್ಷ ಕೋಟಿ ರೂಪಾಯಿ ವೆಚ್ಚದ ಗತಿಶಕ್ತಿ ಉಪಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ದಿಲ್ಲಿಯ ಪ್ರಗತಿ ಮೈದಾನದಲ್ಲಿ ಬುಧವಾರ ಚಾಲನೆ ನೀಡಿದರು.

ಬುಧವಾರ ಬೆಂಗಳೂರಿನ ಅಶೋಕ ಹೋಟೆಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಸತಿ ಮತ್ತು ಮೂಲಸೌಕರ್ಯ ಸಚಿವ ವಿ. ಸೋಮಣ್ಣ ಅವರು ರಾಜ್ಯ ಸರ್ಕಾರದ ಪರವಾಗಿ ಪಾಲ್ಗೊಂಡು, ವೀಡಿಯೋ ಕಾನ್ಫರೆನ್ಸ್‌ ಮೂಲಕ ಉದ್ಘಾಟನಾ ಕಾರ್ಯಕ್ರಮ ವೀಕ್ಷಿಸಿ ಮಾತನಾಡಿದರು.

ಕೊರೊನಾ, ಲಾಕ್‌ಡೌನ್‌ನಿಂದ ಹಳಿ ತಪ್ಪಿದ್ದ ದೇಶದ ಆರ್ಥಿಕತೆ ಮತ್ತೆ ನಿಧಾನಗತಿಗೆ ಹಳಿಗೆ ಮರಳುತ್ತಿದ್ದು, ಅದಕ್ಕೆ ಮತ್ತಷ್ಟು ಉತ್ತೇಜನ ನೀಡಲು, ‘ಗತಿಶಕ್ತಿ’ ಯೋಜನೆ ಪೂರಕವಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

100 ಲಕ್ಷ ಕೋಟಿ ರಾಷ್ಟ್ರೀಯ ಮೂಲಸೌಕರ್ಯದ ಮಾಸ್ಟರ್ ಪ್ಲಾನ್ ಇದಾಗಿದ್ದು, ದೇಶದ ಆರ್ಥಿಕ ಪ್ರಗತಿಗೆ ಸಹಕಾರಿಯಾಗಲಿದೆ. ಜತೆಗೆ ಲಾಜಿಸ್ಟಿಕ್‌ ವೆಚ್ಚವನ್ನೂ ತಗ್ಗಿಸಲಿದೆ ಎಂದು ಹೇಳಿದರು.

ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆಯ ಮೂಲಕ ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಗುರಿ ಹೊಂದಲಾಗಿದೆ. ಈ ಯೋಜನೆಯು ದೇಶದ ಪ್ರಗತಿಯ ಮಾಸ್ಟರ್ ಪ್ಲಾನ್ ಸಿದ್ಧಪಡಿಸುವಲ್ಲಿ ಮತ್ತು ಮೂಲಸೌಕರ್ಯದ ಅಡಿಪಾಯ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಈ ಯೋಜನೆಯ ಮೂಲಕ ಸ್ಥಳೀಯ ಉತ್ಪಾದಕರನ್ನು ಜಾಗತಿಕವಾಗಿ ಸ್ಪರ್ಧಾತ್ಮಕವಾಗಿಸುವ ಗುರಿ ಇದೆ. ಇದು ಕೈಗಾರಿಕೆಗಳ ಅಭಿವೃದ್ಧಿಗೆ ಕಾರಣವಾಗಲಿದೆ ಎಂದು ಸೋಮಣ್ಣ ತಿಳಿಸಿದರು.

ರಾಜ್ಯದಲ್ಲಿ ಕೈಗಾರಿಕಾ-ಸ್ನೇಹಿ ವಾತಾವರಣ ಹಾಗೂ ಸುಲಲಿತ ವ್ಯವಹಾರಕ್ಕೆ ಒತ್ತು ನೀಡಲಾಗುತ್ತಿದೆ. ರಾಷ್ಟ್ರೀಯ ಯೋಜನೆಗೆ ಅನುಗುಣವಾಗಿ ರಾಜ್ಯದಲ್ಲಿನ ಸಂಪರ್ಕ ವ್ಯವಸ್ಥೆಯನ್ನು ಮತ್ತಷ್ಟು ಉತ್ತಮಗೊಳಿಸಲು ಕೇಂದ್ರ ಸರ್ಕಾರದೊಂದಿಗೆ ಕೈ ಜೋಡಿಸುತ್ತದೆ. ರಾಜ್ಯದ ಪೂರ್ವ, ಪಶ್ಚಿಮ, ಉತ್ತರ ಹಾಗೂ ದಕ್ಷಿಣ ವಲಯಗಳಲ್ಲಿ ವಿಮಾನ ನಿಲ್ದಾಣಗಳ ನಿರ್ಮಿಸುವುದರಿಂದ ವಿವಿಧ ಆರ್ಥಿಕ ವಲಯಗಳಿಗೆ ತ್ವರಿತಗತಿಯ ಸಂಪರ್ಕ ದೊರೆಯಲಿದೆ. ರಾಜ್ಯ ಹಾಗೂ ಅಂತಾರಾಜ್ಯ ರೈಲು ಮಾರ್ಗಗಳ ನಿರ್ಮಾಣ ವೆಚ್ಚದಲ್ಲಿ ಶೇ.50ರಷ್ಟು ಭಾಗವನ್ನು ರಾಜ್ಯ ಸರ್ಕಾರ ಭರಿಸುವುದಲ್ಲದೆ, ಅಗತ್ಯ ಭೂಮಿಯನ್ನು ಉಚಿತವಾಗಿ ನೀಡುತ್ತದೆ ಎಂದು ವಿವರಿಸಿದರು.

9 ಹೊಸ ರೈಲು ಮಾರ್ಗಗಳ ಯೋಜನೆಯನ್ನು ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕೈಗೊಳ್ಳಲಾಗುತ್ತದೆ. ಬಂದರು ಹಾಗೂ ಜಲ ಸಾರಿಗೆ ಅಭಿವೃದ್ಧಿ ಮೂಲಕ ಆರ್ಥಿಕ ಹಾಗೂ ಔದ್ಯಮಿಕ ಪ್ರಗತಿ ಹೆಚ್ಚಲಿದೆ ,”ಎಂದೂ ಅವರು ಹೇಳಿದರು

ದಾಬಸ್‌ ಪೇಟೆಯಲ್ಲಿ ಲಾಜಿಸ್ಟಿಕ್‌ ಪಾರ್ಕ್‌ ದಾಬಸ್‌ಪೇಟೆಯಲ್ಲಿ ಮಲ್ಟಿ ಮೋಡಲ್‌ ಲಾಜಿಸ್ಟಿಕ್‌ ಪಾರ್ಕ್‌ (ಎಂಎಂಎಲ್‌) ಅಭಿವೃದ್ಧಿಗೆ 400 ಎಕರೆ ಭೂಮಿ ಗುರುತಿಸಲಾಗಿದೆ. ದೇಶದ ಅತಿ ಹೆಚ್ಚು ಲಾಜಿಸ್ಟಿಕ್‌ ಜಾಲ ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದ್ದು, ನೂತನ ಕೈಗಾರಿಕಾ ನೀತಿಯ ಅನುಷ್ಠಾನದ ಮೂಲಕ ಮೊದಲ ಸ್ಥಾನಕ್ಕೇರುವುದು ನಮ್ಮ ಗುರಿ”ಎಂದರು.

Related Articles

Leave a Reply

Your email address will not be published.

Back to top button