Breaking NewsLatest

DA Increase: ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್​: ತುಟ್ಟಿ ಭತ್ಯೆ ಹೆಚ್ಚಿಸಿ ಸರ್ಕಾರ ಆದೇಶ

ಬೆಂಗಳೂರು: ದೀಪಾವಳಿಗೂ ಮುನ್ನವೇ ಸರ್ಕಾರಿ ನೌಕರರಿಗೆ ರಾಜ್ಯ ಸರಕಾರ ಭರ್ಜರಿ ಗಿಫ್ಟ್‌ ಕೊಟ್ಟಿದೆ. ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ. 3 ರಷ್ಟು ಹೆಚ್ಚಳ ಮಾಡಿದೆ. ತುಟ್ಟಿಭತ್ಯೆಯನ್ನು ಶೇ.21.50 ರಿಂದ ಶೇ.24.50ರವರೆಗೆ ಹೆಚ್ಚಿಸಿ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶ ಹೊರಿಡಿಸಿದೆ. ಈ ಮೂಲಕ ರಾಜ್ಯ ಸರ್ಕಾರ ರಾಜ್ಯದ ಸರ್ಕಾರಿ ನೌಕರರಿಗೆ ದೀಪಾವಳಿ ಹಬ್ಬದ ಗಿಫ್ಟ್ ನೀಡಿದೆ.

ಜುಲೈ 1 ರಿಂದಲೇ ಜಾರಿಗೆ ಬರುವಂತೆ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದು, ನಿವೃತ್ತ ಸರ್ಕಾರಿ ನೌಕರರಿಗೂ ಶೇ.3ರಷ್ಟು ಡಿಎ ಹೆಚ್ಚಳ ಆದೇಶ ಅನ್ವಯವಾಗಲಿದೆ.

ಕೇಂದ್ರ ಸರ್ಕಾರ ಕೂಡ ತನ್ನ ನೌಕರರಿಗೆ ಕಳೆದ ಜುಲೈ 1 ರಿಂದ ಪೂರ್ವಾನ್ವಯವಾಗುವಂತೆ ಶೇ.31 ರಷ್ಟಕ್ಕೆ ತುಟ್ಟಿಭತ್ಯೆ ಹೆಚ್ಚಿಸಿರುವುದನ್ನು ಸ್ಮರಿಸಬಹುದು.

Related Articles

Leave a Reply

Your email address will not be published.

Back to top button