Breaking NewsLatest

ಟಿಎಂಸಿ ಸಂಭ್ರಮಾಚರಣೆ; ರಾಜಸ್ಥಾನ, ಹಿಮಾಚಲದಲ್ಲಿ ಕಾಂಗ್ರೆಸ್, ಮಧ್ಯಪ್ರದೇಶದಲ್ಲಿ ಬಿಜೆಪಿ ಮುನ್ನಡೆ

ನವದೆಹಲಿ: 13 ರಾಜ್ಯಗಳಲ್ಲಿನ ಉಪಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಫಲಿತಾಂಶ ಪ್ರಕಟಗೊಳ್ಳುತ್ತಿದೆ.

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸಂಭ್ರಮಾಚರಣೆ ಶುರುವಾಗಿದೆ. ದಿನ್ಹಾತಾದಲ್ಲಿ ಟಿಎಂಸಿ ಅಭ್ಯರ್ಥಿ ಗೆಲುವು ಸಾಧಿಸಿದ್ದು, ಇತರ ಮೂರು ವಿಧಾನಸಭಾ ಕ್ಷೇತ್ರಗಳಲ್ಲೂ ಟಿಎಂಸಿಯೇ ದೊಡ್ಡ ಅಂತರದೊಂದಿಗೆ ಮುನ್ನಡೆ ಸಾಧಿಸಿದೆ.

ರಾಜಸ್ಥಾನದ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿನತ್ತ ಮುನ್ನಡೆದಿದೆ. ಹಿಮಾಚಲ ಪ್ರದೇಶದಲ್ಲಿಯೂ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಅಲ್ಲಿನ ಮಾಂಡಿ ಲೋಕಸಭಾ ಕ್ಷೇತ್ರ ಹಾಗೂ ಅರ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಫತೇಪುರ್​ದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಈಶಾನ್ಯ ರಾಜ್ಯಗಳು ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ಪ್ರಾಬಲ್ಯ ಕಾಣಿಸುತ್ತಿದೆ.

Related Articles

Leave a Reply

Your email address will not be published. Required fields are marked *

Back to top button