ಸಿನಿಮಾ

Amitabh Bachchan: ಪಾನ್ ಮಸಾಲಾ ಜಾಹೀರಾತಿನಿಂದ ಹೊರಬಂದ ನಟ ಅಮಿತಾಬ್ ಬಚ್ಚನ್

ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರು ಪಾನ್ ಮಸಾಲಾ ಬ್ರಾಂಡ್ ಜಾಹೀರಾತಿನಿಂದ ಹೊರಬಂದಿದ್ದಾರೆ. ಮತ್ತು ಕಂಪೆನಿಯೊಂದಿಗಿನ ಒಪ್ಪಂದವನ್ನು ಅಂತ್ಯಗೊಳಿಸಿದ್ದಾರೆ , ಹಣವನ್ನು ಹಿಂತಿರುಗಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ನಟ ಅಮಿತಾಬ್ ಬಚ್ಚನ್ ಅವರು ಪಾನ್ ಮಸಾಲಾ ಬ್ರಾಂಡ್ ಅನ್ನು ಪ್ರಚಾರ ಮಾಡಿದ್ದಕ್ಕಾಗಿ ಟೀಕೆಗಳನ್ನು ಎದುರಿಸಿದ್ದಾರೆ. ಅವರ ಅನೇಕ ಅಭಿಮಾನಿಗಳು ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಅಮಿತಾಬ್ ಬಚ್ಚನ್ ಅವರು ಈ ಬ್ರಾಂಡ್ ಜಾಹೀರಾತಿನಿಂದ ಹೊರಬಂದಿದ್ದಾರೆ ಎನ್ನಲಾಗುತ್ತಿದೆ.

ಹಾಗೇ ರಾಷ್ಟ್ರೀಯ ತಂಬಾಕು ವಿರೋಧಿ ಸಂಸ್ಥೆ ಈ ಜಾಹೀರಾತಿನಲ್ಲಿ ನಟಿಸದಂತೆ ಮನವಿ ಮಾಡಿದೆ. ಹಾಗಾಗಿ ಅಮಿತಾಬ್ ಬಚ್ಚನ್ ಅವರಿಗೆ ಈ ಜಾಹೀರಾತು ನಿಷೇಧಿತ ಉತ್ಪನ್ನಕ್ಕೆ ಸಂಬಂಧಿಸಿದ ಜಾಹೀರಾತಿನ ಅಡಿಯಲ್ಲಿ ಬರುತ್ತದೆ ಎಂದು ತಿಳಿದಿರಲಿಲ್ಲ. ಹಾಗಾಗಿ ಬಚ್ಚನ್ ಅವರು ಕಂಪೆನಿಯೊಂದಿಗಿನ ಒಪ್ಪಂದವನ್ನು ಅಂತ್ಯಗೊಳಿಸಿದ್ದಾರೆ ಎಂದು ಬಚ್ಚನ್ ಅವರ ಕಚೇರಿಯಿಂದ ಬಿಡುಗಡೆಯಾದ ಬ್ಲಗ್ ಪೋಸ್ಟ್ ನಲ್ಲಿ ತಿಳಿಸಲಾಗಿದೆ.

Related Articles

Leave a Reply

Your email address will not be published.

Back to top button