ಸಿನಿಮಾ
ಚಿಕ್ಕಮಗಳೂರು: ಕಾಫಿನಾಡಿನ ಅಳಿಯನ ನಿಧನಕ್ಕೆ ಸಂತಾಪ
ಚಿಕ್ಕಮಗಳೂರು: ಕಾಫಿನಾಡಿನ ಅಳಿಯ ಪುನೀತ್ ರಾಜ್ ಕುಮಾರ್ ನಿಧನಕ್ಕೆ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಸಂತಾಪ ಸೂಚಕ ಸಭೆ ನಡೆಸಲಾಯಿತು.
ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಆಶ್ರಯದಲ್ಲಿ ವಿವಿಧ ಪಕ್ಷ, ಸಂಘಟನೆಗಳ ಮುಖಂಡರು ಚಿಕ್ಕಮಗಳೂರು ನಗರದ ಆಜಾದ್ ವೃತ್ತದಲ್ಲಿ ಶ್ರದ್ಧಾಂಜಲಿ ಸಭೆ ನಡೆಸಿ, ಅಗಲಿದ ನಟನಿಗೆ ಭಾವಪೂರ್ಣ ನಮನ ಸಲ್ಲಿಸಿದರು. ಇನ್ನೊಂದೆಡೆ ಹನುಮಂತಪ್ಪ ವೃತ್ತದಲ್ಲಿ ಮೇಣದ ಬತ್ತಿ ಹಚ್ಚಿ, ಮೌನಾಚರಣೆ ನಡೆಸಿದರು.
ಸಿಎಂ ಜಿಲ್ಲಾ ಪ್ರವಾಸ ರದ್ದು; ಚಲನಚಿತ್ರ ನಟ ಪುನೀತ್ ರಾಜ್ ನಿಧನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಾಳಿನ ಜಿಲ್ಲಾ ಪ್ರವಾಸ ರದ್ದಾಗಿದೆ.