ಸಿನಿಮಾ

ಜಮಖಂಡಿ ಕನ್ನಡ ಉತ್ಸವ-2021ರಲ್ಲಿ ನಟ ಪುನೀತ್ ರಾಜ್ ಕುಮಾರ್ ಮೊಬೈಲ್ ಬೆಳಕಿನ ಶ್ರದ್ಧಾಂಜಲಿ

ಬಾಗಲಕೋಟೆ: ಜಮಖಂಡಿಯಲ್ಲಿ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮೊಬೈಲ್ ಬೆಳಕಿನ ಮೂಲಕ ಅಭಿಮಾನಿಗಳು ಶ್ರದ್ಧಾಂಜಲಿ ಸಲ್ಲಿಸಿದರು.

ಜಮಖಂಡಿಯಲ್ಲಿ ಜಮಖಂಡಿ ಕನ್ನಡ ಉತ್ಸವ -2021 ಕಾರ್ಯಕ್ರಮದಲ್ಲಿ ಮೊದಲಿಗೆ ನಮ್ಮನ್ನಗಲಿದ ನಟ ಪುನೀತ್ ರಾಜ್ ಕುಮಾರ್ ಅವರಿಗೆ ನೂರಾರು ಜನ ಸೇರಿ ಶ್ರದ್ಧಾಂಜಲಿ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಆನಂದ್ ನ್ಯಾಮಗೌಡ ಮಾತನಾಡಿ, ಪುನೀತ್ ರಾಜಕುಮಾರ್ ಸರಳ ಸಜ್ಜನಿಕೆಯ ಮೇರುನಟ ಅವರೊಂದಿಗೆ ನನ್ನ ನಿನ್ನ ಪ್ರೇಮಗೀತೆ ಎನ್ನುವ ಸಿನಿಮಾದಲ್ಲಿ ಅಭಿನಯಿಸುವ ಅವಕಾಶ ನನಗೆ ಸಿಕ್ಕಿತ್ತು. ಅವರೊಂದಿಗೆ ಕಳೆದ ಸಮಯ ನನ್ನ ಮನಸ್ಸಿನಲ್ಲಿ ಇನ್ನೂ ಹಚ್ಚುಹಸಿರಾಗಿದೆ. ಪುನೀತ್ ರಾಜ್ ಕುಮಾರ್ ಹಾದಿಯಲ್ಲಿ ನಡೆದಾಗ ಅವರ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ, ಮುತ್ತಿನಕಂಠ ಸ್ವಾಮೀಜಿಗಳು ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

Related Articles

Leave a Reply

Your email address will not be published.

Back to top button