ಸಿನಿಮಾ
ಕರೀನಾ ಕಪೂರ್ ಜೊತೆ ನಟಿಸಲಿದ್ದರಾ ನಟ ಪ್ರಭಾಸ್
ಆದಿಪುರುಷ ಚಿತ್ರದಲ್ಲಿ ನಟ ಪ್ರಭಾಸ್ ಅವರು ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಜೊತೆ ನಟಿಸುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಸಮಯದಲ್ಲಿ ಪ್ರಭಾಸ್ ಮತ್ತು ಕರೀನಾ ಕಪೂರ್ ನಡುವೆ ಒಡನಾಟ ಉತ್ತಮವಾಗಿತ್ತು. ಆದರೆ ಈಗ ಪ್ರಭಾಸ್ ಜೊತೆ ಚಿತ್ರವೊಂದರಲ್ಲಿ ಕರೀನಾ ಕಪೂರ್ ತೆರೆ ಹಂಚಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
ಇತ್ತೀಚೆಗೆ ಪ್ರಭಾಸ್ ಅವರು ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರೊಂದಿಗೆ ಮತ್ತುಂದು ಹೊಸ ಚಿತ್ರವನ್ನು ಘೋಷಿಸಿದ್ದಾರೆ. ಮೂಲಗಳ ಪ್ರಕಾರ ಈ ಚಿತ್ರದಲ್ಲಿ ಪ್ರಭಾಸ್ ಜೊತೆ ಕರೀನಾ ಕಪೂರ್ ಸ್ಕ್ರೀನ್ ಹಂಚಿಕೊಳ್ಲಲಿದ್ದಾರೆ ಎಂದು ವರದಿಯಾಗಿದೆ.
ಪ್ರಸ್ತುತ ಅಮೀರ್ ಖಾನ್ ಅವರ ‘ಲಾಲ್ ಸಿಂಗ್ ಚಡ್ಡಾ’ ಚಿತ್ರದಲ್ಲಿ ಬ್ಯುಸಿಯಾಗಿರುವ ನಟಿ ಕರೀನಾ ಕಪೂರ್ ಹೊಸ ಚಿತ್ರಗಳಲ್ಲಿ ನಟಿಸಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಸಂದೀಪ್ ರೆಡ್ಡಿ ವಂಗಾ ಅವರು ಸ್ಕ್ರಿಪ್ಟ್ ನೊಂದಿಗೆ ನಟಿಯನ್ನು ಸಂಪರ್ಕಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.