ಸಿನಿಮಾ

Actor Prabhas: ತನ್ನ ಸಂಭಾವನೆಯನ್ನು ಹೆಚ್ಚಿಸಿಕೊಂಡ ನಟ ಪ್ರಭಾಸ್

ಟಾಲಿವುಡ್ ನ ಸ್ಟಾರ್ ನಟ ಪ್ರಭಾಸ್ ಅವರು ಟಾಲಿವುಡ್ ಚಿತ್ರರಂಗಕ್ಕೆ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಇತ್ತೀಚೆಗೆ ಈ ನಟ ತಮ್ಮ ಸಂಭಾವನೆಯನ್ನು ಹೆಚ್ಚಿಸಿಕೊಂಡಿದ್ದಾರೆ ಎಂಬುದಾಗಿ ವರದಿಯಾಗಿದೆ.

ರಾಧಾ ಕೃಷ್ಣ ಅವರ ‘ರಾಧೆಶ್ಯಾಮ್’ ಚಿತ್ರದ ಚಿತ್ರೀಕರಣ ಪೂರ್ಣಗೊಳಿಸಿದ ನಟ ಪ್ರಸ್ತುತ ‘ಸಲಾರ್ ‘, ‘ಆದಿಪುರುಷ’, ‘ಸ್ಪಿರಿಟ್’ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿನ ವರದಿ ಪ್ರಕಾರ ಪ್ರಭಾಸ್ ಅವರು ಈ ಹಿಂದಿನ ಚಿತ್ರಗಳಿಗೆ 100 ಕೋಟಿ ಸಂಭಾವನೆ ಪಡೆಯುತ್ತಿದ್ದರಂತೆ. ಆದರೆ ಸಂದೀಪ್ ರೆಡ್ಡಿ ವಂಗಾ ಅವರ ಚಿತ್ರಕ್ಕಾಗಿ ಅವರು 150 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಇದಲ್ಲದೇ ಅವರು ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ , ಯುವಿ ಕ್ರಿಯೇಷನ್ಸ್ ಮತ್ತು ಮೈತ್ರಿ ಮೂವಿ ಮೇಕರ್ಸ್ ಜೊತೆ ಮುಂಬರುವ ಯೋಜನೆಗಳಿಗಾಗಿ ಮಾತುಕತೆ ನಡೆಸುತ್ತಿದ್ದಾರೆ. ಪ್ರಭಾಸ್ ಈ ವರ್ಷ ಇನ್ನೂ ಎರಡು ಯೋಜನೆಗಳನ್ನು ಘೋಷಿಸಲಿದ್ದಾರೆ ಎನ್ನಲಾಗುತ್ತಿದೆ

Related Articles

Leave a Reply

Your email address will not be published.

Back to top button