Latest
Bangladesh: ಬಾಂಗ್ಲಾದಲ್ಲಿ ಹಿಂದೂಗಳ ಮನೆಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಢಾಕಾ: ಬಾಂಗ್ಲಾದೇಶಲ್ಲಿ ದುರ್ಗಾಪೂಜೆ ಸಂದರ್ಭದಲ್ಲಿ ದೇಗುಲ ಧ್ವಂಸ ಘಟನೆಗಳ ವಿರುದ್ಧ ಅಲ್ಪಸಂಖ್ಯಾತ ಸಮುದಾಯದಿಂದ ಪ್ರತಿಭಟನೆ ನಡೆದ ಬೆನ್ನಲ್ಲೇ ಹಿಂದೂಗಳು 66 ಮನೆಗಳನ್ನು ದುಷ್ಕರ್ಮಿಗಳು ಧ್ವಂಸ ಮಾಡಿದ್ದಾರೆ. ಕನಿಷ್ಠ 20 ಮನೆಗಳಿಗೆ ಬೆಂಕಿ ಹಚ್ಚಿರುವುದು ವರದಿಯಾಗಿದೆ.
ಬಾಂಗ್ಲಾ ರಾಜಧಾನಿ ಢಾಕಾದಿಂದ 255 ಕಿ ಮೀ ದೂರದ ಗ್ರಾಮವೊಂದರಲ್ಲಿ ದುಷ್ಕರ್ಮಿಗಳು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಯುವಕನೊಬ್ಬ ಅವಹೇಳನಕಾರಿ ಪೋಸ್ಟ್ ಮಾಡಿದ್ದಾನೆಂಬ ಆರೋಪದಿಂದ ಉದ್ವಿಗ್ನ ಪರಿಸ್ಥಿತಿ ಉಂಟಾಗಿ ವ್ಯಕ್ತಿಯ ಮನೆಯ ಸುತ್ತಲೂ ಪೊಲೀಸ್ ಕಾವಲು ಇದ್ದಾಗ ದಾಳಿಕೋರರು ಹತ್ತಿರದ ಇತರೆ ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.