Latest

ಬಿಜೆಪಿಯ 40 ಶಾಸಕರು ಕಾಂಗ್ರೆಸ್​​ಗೆ ಸೇರಲಿದ್ದಾರೆ: ಹೊಸ ಬಾಂಬ್ ಸಿಡಿಸಿದ ಮಾಜಿ ಶಾಸಕ ರಾಜು ಕಾಗೆ

ಬೆಳಗಾವಿ: ಶೀಘ್ರದಲ್ಲೇ 40 ಶಾಸಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಶಾಸಕ ರಾಜು ಕಾಗೆ ತಿಳಿಸಿದ್ದಾರೆ.

ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ಮಾತನಾಡಿದ ಬಿಜೆಪಿ ಸರ್ಕಾರದಲ್ಲಿ ಅಸಮಾಧಾನ ಹೆಚ್ಚಾಗಿದೆ ಹೊಂದಾಣಿಕೆ ಇಲ್ಲದ್ದರಿಂದ ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಆದ್ದರಿಂದ ಅಸಮಾಧಾನದಿಂದ 40 ಶಾಸಕರು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂದರು

ಬೆಲೆ ಏರಿಕೆಯಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನಿಗೆ ಜನ ಶಾಪ ಹಾಕುತ್ತಿದ್ದಾರೆ. ಮಾಜಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿಯಾಗಿದ್ದ ವೇಳೆ ನೀನು ತಯಾರಿ ನಡೆಸು ಎಲ್ಲರಿಗೂ ಬೆನ್ನು ಹತ್ತಿದ್ದೇವೆ ನಮ್ಮ ಸರ್ಕಾರ ಬರುತ್ತೆ ಅಂತಾ ಹೇಳಿದ್ದಾರೆ ಎಂದು ರಾಜು ಕಾಗೆ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button