Latest

ದಸರಾ ಜಂಬೂಸವಾರಿ ವೀಕ್ಷಣೆಗೆ 500 ಮಂದಿಗೆ ಮಾತ್ರ ಅವಕಾಶ: ಸಚಿವ ಎಸ್ ​ಟಿ ಸೋಮಶೇಖರ್

ಮೈಸೂರು: ಮೈಸೂರು ದಸರಾ ಜಂಬೂಸವಾರಿ ವೀಕ್ಷಣೆಗೆ ಮೊದಲು ಬರುವಂತಹ 500 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದ ಎಂದು ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ, ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಜಂಬೂ ಸವಾರಿ ನಡೆಯಲಿದೆ. ಇದರ ಹೊರತು ಬೇರೆ ಯಾವುದೇ ಕಾರ್ಯಕ್ರಮಕ್ಕೆ ಅವಕಾಶವಿಲ್ಲ. ಜಂಬೂ ಸವಾರಿ ವೀಕ್ಷಣೆಗೆ 500 ಜನರಿಗೆ ಅವಕಾಶವಿದ್ದು, ಯಾವ ರೀತಿ ಅವಕಾಶ ಕಲ್ಪಿಸಬೇಕು ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.

ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರಿಗೆ ದಸರಾ ಮಹೋತ್ಸವಕ್ಕೆ ಆಹ್ವಾನ ನೀಡಿ ದಸರಾಗೆ ಪೂರ್ಣ ಸಹಕಾರ ನೀಡುವಂತೆ ಕೋರಲಾಯಿತು. ಅದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.

ಅರಮನೆಯ ಕಾರ್ಯಕ್ರಮಗಳಿಗೂ ಯಾವುದೇ ಅಡಚಣೆಯಾಗದ ರೀತಿಯಲ್ಲಿ ಸಹಕಾರ ನೀಡುವಂತೆ ಅವರೂ ಕೋರಿದರು. ಅದಕ್ಕೆ ಸಂಪೂರ್ಣ ಸಹಕಾರ ಕೊಡುವುದಾಗಿ ತಿಳಿಸಲಾಗಿದೆ ಎಂದರು.

ಅ.7ರಿಂದ 15 ರವರೆಗೆ ದಸರಾ ನಡೆಯಲಿದೆ. ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ 400 ಜನರಿಗೆ ಅವಕಾಶ ನೀಡಲಾಗಿದೆ. ಚಾಮುಂಡಿಬೆಟ್ಟದಲ್ಲಿ ಯಾವುದೇ ನಿರ್ಬಂಧ ಇಲ್ಲ. ದೇವರ ದರ್ಶನ ಮಾಡುವವರು ಮಾಡಬಹುದು ಎಂದು ತಿಳಿಸಿದರು.

Related Articles

Leave a Reply

Your email address will not be published.

Back to top button