Latest

Madhya Pradesh: ಮಧ್ಯಪ್ರದೇಶದಲ್ಲಿ ಬಸ್- ಟ್ರಕ್​​​​ ನಡುವೆ ಭೀಕರ ಅಪಘಾತ; 7 ಜನರ ದುರ್ಮರಣ

ನವದೆಹಲಿ: ಬಸ್ ಹಾಗೂ ಟ್ರಕ್​​​​ ನಡುವೆ ಭೀಕರ ಅಪಘಾತ ಸಂಭವಿಸಿ 7 ಜನರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶ ರಾಜ್ಯದದಲ್ಲಿ ನಡೆದಿದೆ.

ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಭೀಂಡ್ ಜಿಲ್ಲೆಯ ಹಳ್ಳಿ ಸಮೀಪ ಈ ಘಟನೆ ಸಂಭವಿಸಿದೆ. ಸ್ಥಳದಲ್ಲೇ 7 ಜನರು ಸಾವನ್ನಪ್ಪಿದ್ದು, 13 ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ. ಇದೀಗ ಅವರನ್ನು ಗ್ವಾಲಿಯರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ನಲ್ಲಿ 30 ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related Articles

Leave a Reply

Your email address will not be published.

Back to top button