Latest
ಕಡೂರಿನ ಯೋಧ ಶೇಷಪ್ಪ ಜಮ್ಮುವಿನಲ್ಲಿ ಸಾವು
ಚಿಕ್ಕಮಗಳೂರು: ಕಡೂರು ತಾಲೂಕಿನ ಬಿಳುವಾಲ ಗ್ರಾಮದ ಯೋಧ ಬಿ ಕೆ ಶೇಷಪ್ಪ (45)ಜಮ್ಮುವಿನಲ್ಲಿ ಮೃತಪಟ್ಟಿದ್ದಾರೆ. ಬಿಎಸ್ಎಫ್ ಮೆಕ್ಯಾನಿಕಲ್ ವಿಭಾಗದಲ್ಲಿ ಶೇಷಪ್ಪ ಕರ್ತವ್ಯ ನಿರ್ವಹಿಸುತ್ತಿದ್ದರು.
ನಾಲ್ಕು ದಿನಗಳ ಹಿಂದೆ ವಾಹನ ರಿಪೇರಿ ಮಾಡುವಾಗ ತಲೆಗೆ ಗಾಯವಾಗಿತ್ತು. ವಾಹನಕ್ಕೆ ಕೊಟ್ಟಿದ್ದ ಜಾಕ್ ಸ್ಲೀಪ್ ಆಗಿ ತಲೆಗೆ ಗಂಭೀರ ಗಾಯಗೊಂಡು ನಾಲ್ಕು ದಿನದಿಂದ ಕೋಮಾದಲ್ಲಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಜಮ್ಮು ಮತ್ತು ಕಾಶ್ಮೀರದ ನೌಶೇರಾ-ಸುಂದರ್ಬಾನಿ ವಲಯದ ಗಡಿ ನಿಯಂತ್ರಣ ರೇಖೆ ಬಳಿ ಈಚೆಗೆ ನಡೆದ ನೆಲಬಾಂಬ್ ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಜಮ್ಮು ಕಾಶ್ಮೀರದ ಪೊಲೀಸರು ತಿಳಿಸಿದ್ದಾರೆ.
ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ನಡೆದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಓರ್ವ ಅಧಿಕಾರಿ ಮತ್ತು ಸೈನಿಕರೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ