ಬೆಂಗಳೂರು: ಚಿತ್ರನಟ ಪುನೀತ್ ರಾಜ್ಕುಮಾರ್ ಅವರು ಅಗಲಿ ನವೆಂಬರ್ 8 ಕ್ಕೆ ಹನ್ನೊಂದು ದಿನಗಳಾಗಿವೆ. ಇಂದು ಬೆಳಗ್ಗೆ ಪುಣ್ಯಸ್ಮರಣೆ ಕಾರ್ಯಕ್ರಮದ ಇರುವುದರಿಂದ ನಗರದ ಕಂಠೀರವ ಸ್ಟುಡಿಯೋ ಬಳಿಯಿರುವ ಪುನೀತ್ ರಾಜ್ಕುಮಾರ್ ಅವರ ಸಮಾಧಿ ವೀಕ್ಷಣೆಗೆ ಅವಕಾಶವಿಲ್ಲ.
ಮಧ್ಯಾಹ್ನ 12 ಗಂಟೆಯ ನಂತರ ಸಮಾಧಿ ವೀಕ್ಷಣೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಪೋಲಿಸ್ ಪ್ರಕಟಣೆ ತಿಳಿಸಿದೆ.