Latestಸಿನಿಮಾ

ಅಂತ್ಯ ಸಂಸ್ಕಾರದ ಸಂದರ್ಭದಲ್ಲಿ ನೀಡಿದ ಸಹಕಾರಕ್ಕೆ ಸರ್ಕಾರಕ್ಕೆಕೃತಜ್ಞತೆ ಸಲ್ಲಿಸಿದ ಅಶ್ವಿನಿ ಪುನೀತ್ ರಾಜಕುಮಾರ್

ಬೆಂಗಳೂರು: ಪುನೀತ್ ರಾಜಕುಮಾರ್ ಅವರ ಅಕಾಲಿಕ ನಿಧನದ ಸಂದರ್ಭದಲ್ಲಿ, ಬೆಂಬಲವಾಗಿ ನಿಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ, ಸಚಿವರು, ಶಾಸಕರು, ಪೊಲೀಸ್ ಇಲಾಖೆ ಸೇರಿದಂತೆ ಎಲ್ಲರಿಗೂ ಅಶ್ವಿನಿ ಪುನೀತ್ ರಾಜಕುಮಾರ್ ದೂರವಾಣಿ ಮತ್ತು ಪತ್ರ ಮುಖೇನ ಕೃತಜ್ಞತೆ ಸಲ್ಲಿಸಿದ್ದಾರೆ.

ಈ ಕುರಿತು, ಸ್ವತಃ ಮುಖ್ಯಮಂತ್ರಿ, ಗೃಹ ಸಚಿವರು ಮತ್ತಿತರೊಡನೆ ಮಾತನಾಡಿರುವ, ಶ್ರೀಮತಿ ಅಶ್ವಿನಿ ಪುನೀತ್ ರಾಜಕುಮಾರ್ ರವರು, “ನಮ್ಮ ನೋವನ್ನು
ಅಡಗಿಸಿಟ್ಟುಕೊಂಡು, ಅವರನ್ನು ಸಕಲ ಗೌರವಗಳೊಂದಿಗೆ ಕಳುಹಿಸಿಕೊಡುವುದು ಅನಿವಾರ್ಯವಾಗಿತ್ತು. ಇಂತಹ ಸಂಧರ್ಭದಲ್ಲಿ ತಾವೆಲ್ಲರೂ ನಮಗೆ ಬೆಂಬಲವಾಗಿ ನಿಂತಿ ಸಕಲ ವ್ಯವಸ್ಥೆ ಮಾಡಿದ್ದೀರಿ ” ಎಂದು ತಿಳಿಸಿದರು.

“ಲಕ್ಷಾಂತರ ಅಭಿಮಾನಿಗಳಿಗೆ ಅಂತಿಮ ದರ್ಶನದ ವ್ಯವಸ್ಥೆ ಮಾಡಿದ್ದಷ್ಟೇ ಅಲ್ಲದೆ ಅಂತ್ಯಸಂಸ್ಕಾರ ಪ್ರಕ್ರಿಯೆ ಸಂಪೂರ್ಣವಾಗುವವರೆಗೂ ಜೊತೆಗಿದ್ದು ಧೈರ್ಯ ನೀಡಿದ್ದೀರಿ. ನೀವು ಕೈಗೊಂಡ ಕ್ರಮಗಳಿಂದ ನಾವು ಅವರಿಗೊಂದು ಸೂಕ್ತವಾದ ವಿದಾಯ ಹೇಳಲು ಸಾಧ್ಯವಾಗಿದೆ. ನಿಮ್ಮ ಈ ಸಹಕಾರಕ್ಕೆ ನಮ್ಮ ಇಡೀ ಕುಟುಂಬ ಮತ್ತು ಎಲ್ಲ ಅಭಿಮಾನಿಗಳ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು” ಎಂದೂ ಅವರು ಹೇಳಿದ್ದಾರೆ.

Related Articles

Leave a Reply

Your email address will not be published.

Back to top button