Latest
Election Campaign: ಸೋಮವಾರದಿಂದ ಉಪ ಚುನಾವಣೆ ಪ್ರಚಾರ ಆರಂಭ: ಸಿಎಂ ಬೊಮ್ಮಾಯಿ
ಬೆಂಗಳೂರು: ಸೋಮವಾರದಿಂದ ಹಾನಗಲ್ ಮೂಲಕ ತಾವು ಉಪ ಚುನಾವಣೆ ಪ್ರಚಾರ ಆರಂಭಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದುಗಾರರೊಂದಿಗೆ ಮಾತನಾಡಿದ ಅವರು, ಹಾನಗಲ್ ನಂತರ ಸಿಂಧಗಿ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುತ್ತೇನೆ ಎಂದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಕ್ಟೋಬರ್ 20ರ ನಂತರ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ನಡೆಸುವರು ಎಂದು ತಿಳಿಸಿದರು.
ತಾವು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿಲ್ಲ ಎಂದು ಯಡಿಯೂರಪ್ಪ ಅವರು ರಲ್ಲಿ ಈಗಾಗಲೇ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.