Latest
Congress: ಸಿಂದಗಿ, ಹಾನಗಲ್ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ
ಬೆಂಗಳೂರು : ವಿಜಯಪುರ ಜಿಲ್ಲೆಯ ಸಿಂದಗಿ ಹಾಗೂ ಹಾವೇರಿ ಜಿಲ್ಲೆಯ ಹಾನಗಲ್ ಉಪಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಇದೀಗ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ಅಶೋಕ್ ಮನಗೂಳಿ ಹಾಗೂ ಹಾನಗಲ್ ಕ್ಷೇತ್ರಕ್ಕೆ ಶ್ರೀನಿವಾಸ್ ಮಾನೆ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ.
ಅಕ್ಟೋಬರ್ 8 ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.