Latest

ಉಪನಗರ ರೈಲು ಯೋಜನೆ ಭೂಸ್ವಾಧೀನ ಚುರುಕುಗೊಳಿಸಲು ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಉಪನಗರ ರೈಲು ಯೋಜನೆಯ ಭೂ ಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರು ಮಿಷನ್ 2022 ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ಸಿಎಂ ಈ ಸೂಚನೆ ನೀಡಿದರು, ಬೆಂಗಳೂರಿನಲ್ಲಿ ಮೊದಲ ಹಂತದಲ್ಲಿ ಒಟ್ಟು 15.40 ಕಿ. ಮೀ. ಉಪನಗರ ರೈಲು ಮಾರ್ಗ ನಿರ್ಮಿಸಲು ಉದ್ದೇಸಲಾಗಿದೆ.

ನಗರದ ಕೇಂದ್ರ ಭಾಗದ ರಸ್ತೆಗಳ ಅತ್ಯುತ್ತಮ ನಿರ್ವಹಣೆ ಹಾಗೂ ಸುಗಮ ಸಂಚಾರ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಸ್ಮಾರ್ಟ್ ಸಿಟಿ ಯೋಜನೆ ಕುರಿತು ಪ್ರತ್ಯೇಕ ಸಭೆ ನಡೆಸಿ ಪರಿಶೀಲಿಸುವುದಾಗಿ ತಿಳಿಸಿದರು.

ಬೆಂಗಳೂರು ಮೆಟ್ರೋ ರೈಲು ಯೋಜನೆಯನ್ನು ನಿಗದಿತ ಗುರಿಗೆ ಒಂದು ವರ್ಷ ಮೊದಲೇ ಪೂರ್ಣ ಗೊಳಿಸಬೇಕು. ಇದಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕೆರೆಗಳ ಅಭಿವೃದ್ಧಿ ಮತ್ತು ಪುನಶ್ಚೇತನ ಯೋಜನೆಯಡಿ ಸುಮಾರು 128 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿರುವ 25 ಕೆರೆಗಳ ಅಭಿವೃದ್ಧಿ ಯೋಜನೆಯನ್ನು ಬರುವ ಜನವರಿ ಅಂತ್ಯದ ವೇಳೆಗೆ ಪೂರ್ಣ ಗೊಳ್ಳಲಿದೆ. ಕೆರೆ ಅಭಿವೃದ್ಧಿ ಮಾಡುವಾಗ ಒತ್ತುವರಿ ತೆರವು ಗೊಳಿಸಿ ಹಸಿರು ಬೇಲಿ (Green fencing) ಹಾಕುವಂತೆ ಸೂಚಿಸಿದರು.

ಜತೆಗೆ ಕೆ 100 ವಾಟರ್ ವೇ ಯೋಜನೆಯಡಿ 11 ಕಿ. ಮೀ. ರಾಜಕಾಲುವೆ ಯನ್ನು ಪ್ರೇಕ್ಷಣೀಯ ಸ್ಥಳ ವಾಗಿ ಅಭಿವೃದ್ಧಿ ಪಡಿಸುವ ಕಾಮಗಾರಿಯಲ್ಲಿ ಒಳಚರಂಡಿ ನೀರು ಕಾಲುವೆಗೆ ಸೇರದಂತೆ ಮುನ್ನೆಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದರು.

Related Articles

Leave a Reply

Your email address will not be published. Required fields are marked *

Back to top button