Latest

Rakesh Tikait: ಲಖೀಂಪುರ್ ಖೇರಿ ಹಿಂಸಾಚಾರ ಸ್ಥಳಕ್ಕೆ ರಾಕೇಶ್ ಟಿಕಾಯತ್ ಭೇಟಿ

ಗಾಝಿಯಾಬಾದ್: ರೈತ ಹೋರಾಟದ ವೇಳೆ ನಡೆದ ಹಿಂಸಾಚಾರದಲ್ಲಿ ಎಂಟು ಮಂದಿ ಬಲಿಯಾಗಿದ್ದು, ಲಿಖೀಂಪುರ ಕೇರಿಗೆ ಭಾರತ್ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ತಮ್ಮ ಬೆಂಬಲಿಗ ರೈತ ಪಡೆಯೊಂದಿಗೆ ಧಾವಿಸಿದ್ದಾರೆ.

ಲಖೀಂಪುರ್ ಖೇರಿಯ ಪರಿಸ್ಥಿತಿಯ ಬಗ್ಗೆ ಅಲ್ಲಿನ ರೈತರು ಮತ್ತು ಜನರೊಂದಿಗೆ ಚರ್ಚಿಸಿ, ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಕಳೆದ 10 ದಿನಗಳಿಂದ ಇಲ್ಲಿ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಕೇಂದ್ರ ಗೃಹಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರನ್ನು ತಕ್ಷಣವೇ ಬಂಧಿಸಬೇಕು ಎಂದು ರಾಕೇಶ್ ಟಿಕಾಯತ್ ಆಗ್ರಹಿಸಿದ್ದಾರೆ.

ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್‌ ಮೌರ್ಯ ಅವರ ವಿರುದ್ಧ ಲಖಿಮಪುರ ಖೇರಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಅಲ್ಲಿಗೆ ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಬಂದರು. ಆಗ ಅವರ ಬೆಂಗಾವಲು ಪಡೆಯ ಎರಡು ಎಸ್‌ಯುವಿಗಳು ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಹರಿದವು. ಇದರಿಂದ ನಾಲ್ವರು ರೈತರು ಬಲಿಯಾದರು.

Related Articles

Leave a Reply

Your email address will not be published.

Back to top button