Latest
ಎರಡು ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ : ಸಿಂದಗಿಯಲ್ಲಿ ಬಿಜೆಪಿ, ಹಾನಗಲ್ ನಲ್ಲಿ ಕಾಂಗ್ರೆಸ್ ಮುನ್ನಡೆ
ಬೆಂಗಳೂರು : ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದು ಮಧ್ಯಾಹ್ನದ ವೇಳೆಗೆ ಸ್ಪಷ್ಟ ಫಲಿತಾಂಶ ಬರಲಿದೆ.
ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಭಾರಿ ಮುನ್ನಡೆ ಸಾಧಿಸಿದ್ದಾರೆ. ರಮೇಶ್ ಭೂಸನೂರ ಅವರು 9ನೇ ಸುತ್ತಿನಲ್ಲಿ 17060 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ರಮೇಶ್ ಭೂಸನೂರ 41398 ಮತಗಳು ಅಶೋಕ್ ಮನಗೋಳಿ 25448 ಮತಗಳನ್ನ ಪಡೆದಿದ್ದಾರೆ.
ಹಾನಗಲ್ ನಲ್ಲಿ ಬಿಜೆಪಿ ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಹಣಾಹಣಿ ನಡೆದಿದೆ. ಈ ಕ್ಷೇತ್ರದಲ್ಲಿ 7ನೇ ಸುತ್ತಿನಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಶ್ರೀನಿವಾಸ್ ಮಾನೆ 1498 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ 27244 ಮತಗಳು ಬಿಜೆಪಿ ಅಭ್ಯರ್ಥಿ 25746 ಮತಗಳನ್ನ ಪಡೆದಿದ್ದಾರೆ. ಎರಡು ಕ್ಷೇತ್ರದಲ್ಲಿ ಜೆಡಿಎಸ್ 3ನೇ ಸ್ಥಾನ ಗಳಿಸಿದೆ.