Latest
Chamundeshwari Rathotsava: ನಾಳೆ ಚಾಮುಂಡೇಶ್ವರಿ ರಥೋತ್ಸವ
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಬಳಿಕ ನಾಳೆ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ರಥೋತ್ಸವ ನಡೆಯಲಿದೆ.
ನಾಳೆ ಬೆಳಿಗ್ಗೆ 7.18ರಿಂದ 7.40ರ ವರೆಗೆ ಸಾಂಪ್ರದಾಯಿಕವಾಗಿ ಮತ್ತು ಸರಳವಾಗಿ ರಥೋತ್ಸವ ನಡೆಯಲಿದೆ. ನಾಳೆ ರಥೋತ್ಸವದಂದು ಬೆಳಿಗ್ಗೆ 4 ರಿಂದ 10 ಗಂಟೆಯವರೆಗೆ ಸಾರ್ವಜನಿಕರಿಗೆ ಮತ್ತು ವಾಹನಗಳಿಗೆ ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿಷೇಧಿಸಲಾಗಿದೆ.
ರಥೋತ್ಸವ ಸರಳವಾದ್ದರಿಂದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ದೇವಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡುವರು.
ದೇವಸ್ಥಾನದ ಸುತ್ತ ಪ್ರಭಾವಳಿ ನಡೆಸಿ, ಬಳಿಕ ಸರ್ಕಾರಿ ಉತ್ತನಹಳ್ಳಿಯ ಜ್ವಾಲಾಮುಖಿ ತ್ರಿಪುರ ಸುಂದರಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸುವರು.
ಪ್ರತಿ ವರ್ಷದಂತೆ ಈ ಬಾರಿಯೂ ತಮ್ಮ ಮನೆದೇವರು ಚಾಮುಂಡೇಶ್ವರಿಗೆ ರಾಜವಂಶಸ್ಥರು ಪೂಜೆ ಸಲ್ಲಿಸಲಿದ್ದಾರೆ