Latest

ಸಿದ್ದರಾಮಯ್ಯ ಆಡುವ ಮಾತಿಗೆ ನಾನು ಉತ್ತರ ನೀಡುವುದಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ಕಲಬುರಗಿ: ಬಿಜೆಪಿಯವರು ಬರೀ ಸುಳ್ಳು ಹೇಳುತ್ತಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಿಂದಗಿ ಹಾಗೂ ಹಾನಗಲ್ ಉಪ ಚುನಾವಣೆ ಮೂಲಕ ಜನರೆ ಉತ್ತರ ಕೊಡುತ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಿಂದಗಿ ಉಪ ಚುನಾವಣಾ ಪ್ರಚಾರಕ್ಕೆ ತೆರಳಲು ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ವೇಳೆ ಸಿಎಂ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಸಿದ್ದರಾಮಯ್ಯ ಆಡುವ ಮಾತಿಗೆ ನಾನು ಉತ್ತರ ನೀಡುವುದಿಲ್ಲ, ಸಿಂದಗಿ ಹಾಗೂ ಹಾನಗಲ್ ಉಪ ಚುನಾವಣೆ ಮುಗಿಯಲಿ ಸಿದ್ದರಾಮಯ್ಯ ಅವರಿಗೆ ಗೊತ್ತಾಗುತ್ತದೆ. ಎರಡು ಕ್ಷೇತ್ರದ ಜನರೇ ಸಿದ್ದರಾಮಯ್ಯ ನವರಿಗೆ ಉತ್ತರ ಕೊಡುತ್ತಾರೆ ಎಂದರು.

ಇನ್ನು 371 ಕೋಶವನ್ನು ಕಲಬುರಗಿಗೆ ಸ್ಥಳಾಂತರ ಮಾಡಿ ಆದೇಶ ಹೊರಡಿಸಲಾಗಿದೆ. ಶೀಘ್ರದಲ್ಲೇ ಕಲಬುರಗಿ ಯಲ್ಲಿ ಆರಂಭಗೊಳ್ಳಲಿದೆ. ಕೆಕೆಆರ್‌ಡಿಬಿಗೆ 1500 ಕೋಟಿ ರೂಪಾಯಿ ಪ್ರತ್ಯೇಕ ಡಿಪಿಆರ್ ರೂಪಿಸಿ ಸಲ್ಲಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಹಾಗೂ ಕಾಳಗಿ ತಾಲೂಕಿನ ಹೊಸಳ್ಳಿ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಕಂಪಿಸುತ್ತಿರುವ ಭೂ ಕಂಪನ ಬಗ್ಗೆ ಮಾತನಾಡಿ, ಭೂಕಂಪ ಪೀಡಿತ ಹಳ್ಳಿಗರಿಗೆ ಸೂಕ್ತ ಕ್ರಮ ಕೈಗೊಂಡು, ಪರಿಹಾರ ನೀಡಲು ಹಾಗೂ ಶೆಡ್ ನಿರ್ಮಿಸಲು ಈಗಾಗಲೇ ಹೇಳಲಾಗಿದೆ. ಕಲಬುರಗಿ ಜಿಲ್ಲಾಧಿಕಾರಿ ಭೇಟಿ ನೀಡಿದ್ದಾರೆ. ಕಂದಾಯ ಸಚಿವ ಆರ್.ಅಶೋಕ್​​​ ಅವರು ಕೂಡ ಸ್ಥಳದಲ್ಲಿ ಇದ್ದಾರೆ. ತಜ್ಞರ ವರದಿ ಬಂದ ಬಳಿಕ ಎಲ್ಲರಿಗೂ ವೈಯಕ್ತಿಕ ಶೆಡ್ ನಿರ್ಮಿಸಲು ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದರು.

Related Articles

Leave a Reply

Your email address will not be published. Required fields are marked *

Back to top button