Latest

ಕೇಂದ್ರದ ಪ್ರಮಾಣೀಕರಣದ ನಂತರ ಮಕ್ಕಳಿಗೆ ಕೋವಿಡ್ ಲಸಿಕೆ: ಸಿಎಂ ಬಸವರಾಜ ಬೊಮ್ಮಾಯಿ

ಉಡುಪಿ: ಮಕ್ಕಳಿಗೆ ಕೋವಿಡ್ ಲಸಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರದ ಪ್ರಮಾಣೀಕರಣದ ನಿರೀಕ್ಷೆಯಲ್ಲಿದ್ದೇವೆ‌ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳು‌ ಮತ್ತು ಹದಿ ಹರೆಯದವರಿಗೆ ಕೋವಿಡ್ ಲಸಿಕೆ ಪರೀಕ್ಷೆ ಕೊನೆಯ ಹಂತ ತಲುಪಿದೆ. ಇದಕ್ಕೆ ಒಪ್ಪಿಗೆ ಸಿಕ್ಕ ತಕ್ಷಣ ಲಸಿಕೆ ಹಾಕಲಾಗುವುದು ಎಂದರು.

ಈಗಾಗಲೇ ಲಸಿಕೆ ಕಾರ್ಯಕ್ರಮದಲ್ಲಿ ಕರ್ನಾಟಕ ಮುಂದಿದ್ದು, ಸುಮಾರು 82 ರಷ್ಟು ಮೊದಲನೇ ಡೋಸ್ ಹಾಗೂ ಶೇ. 37 ರಷ್ಟು ಎರಡನೇ ಡೋಸ್ ನೀಡಲಾಗಿದೆ. ಡಿಸೆಂಬರ್ ಅಂತ್ಯಕ್ಕೆ ಶೇ 90 ರಷ್ಟು ಮೊದಲನೇ ಹಾಗೂ ಶೇ 75 ರಷ್ಟು ಎರಡನೇ ಡೋಸ್ ಲಸಿಕೆಯನ್ನು ಹಾಕುವ ಗುರಿಯನ್ನು ಹೊಂದಲಾಗಿದೆ ಎಂದು ಹೇಳಿದರು.

ಮತಾಂತರ ನಿಷೇಧ ಕಾಯ್ದೆ:

ಮತಾಂತರ ನಿಷೇಧ ಕಾಯ್ದೆ ಜಾರಿ ಬಗ್ಗೆ ಚಿಂತನೆ ಮಾಡಿದ್ದು, ಇತರೆ ರಾಜ್ಯಗಳಲ್ಲಿ ಜಾರಿಯಲ್ಲಿರುವ ಈ ಕಾಯ್ದೆಯ ಬಗ್ಗೆ ಅಧ್ಯಯನ ಮಾಡಲಾಗುತ್ತಿದೆ. ಆದಷ್ಟು ಬೇಗನೆ ಕಾಯ್ದೆಯನ್ನು ಅನುಷ್ಠಾನಕ್ಕೆ ತರಲಾಗುವುದೆಂದು ಮುಖ್ಯಮಂತ್ರಿಗಳು ತಿಳಿಸಿದರು.

Related Articles

Leave a Reply

Your email address will not be published.

Back to top button