Latest

ರಾಜ್ಯೋತ್ಸವ ಮೆರವಣಿಗೆ ಬಗ್ಗೆ ತಜ್ಞರ ಸಮಿತಿಯೊಂದಿಗೆ ಚರ್ಚಿಸಿ ತೀರ್ಮಾನ: ಸಿಎಂ ಬೊಮ್ಮಾಯಿ

ಬೆಳಗಾವಿ: ಬೆಳಗಾವಿಯಲ್ಲಿ ಅದ್ಧೂರಿ ರಾಜ್ಯೋತ್ಸವ ಆಚರಣೆ ಕುರಿತು ಕನ್ನಡಪರ ಸಂಘಟನೆಗಳ ಒತ್ತಾಯ ವಿಚಾರ ಗಮನಕ್ಕೆ ಬಂದಿದೆ. ಈ ಬಗ್ಗೆ ಶೀಘ್ರವೇ ತಜ್ಞರ ಜೊತೆ ಚರ್ಚೆ ನಡೆಸಿ ತೀರ್ಮಾನ ಮಾಡುತ್ತೇವೆ. ಕೋವಿಡ್ ನಿಯಂತ್ರಣಕ್ಕೆ ಬರುತ್ತಿದೆ. ಆದರೆ ಮೆರವಣಿಗೆಗಳ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಿನ್ನೆ ಸಿಂದಗಿಯಲ್ಲಿ ಪ್ರಚಾರ ಮಾಡಿ, ಇವತ್ತು ಬೆಂಗಳೂರು ಹೋಗುತ್ತಿದ್ದೇನೆ. ವಾಲ್ಮೀಕಿ ಜಯಂತಿಯಲ್ಲಿ ಪಾಲ್ಗೊಂಡು ಇಂದು ಸಂಜೆ ಹಾನಗಲ್‌ಗೆ ವಾಪಸ್ ಆಗಲಿದ್ದೇನೆ. ಮೂರು ದಿನಗಳ ಕಾಲ ಹಾನಗಲ್​ನಲ್ಲಿ ಉಳಿದುಕೊಂಡು ಪ್ರಚಾರ ಮಾಡುತ್ತೇನೆ. 23ರಂದು ಬೆಳಗಾವಿಗೆ ಬಂದು ಕಿತ್ತೂರು ಚೆನ್ನಮ್ಮ ಉತ್ಸವದಲ್ಲಿ ಭಾಗಿಯಾಗುತ್ತೇನೆ ಎಂದರು.

ಮುಂಬೈ ಕರ್ನಾಟಕ ಭಾಗವನ್ನು ಕಿತ್ತೂರು ಕರ್ನಾಟಕ ಎಂದು ಮರುನಾಮಕರಣ ಸಂಬಂಧ ಸಂಪುಟ ಸಭೆಯಲ್ಲಿ ತೀರ್ಮಾನ ಆಗಬೇಕು ಎಂದು ಹೇಳಿದರು.

Related Articles

Leave a Reply

Your email address will not be published. Required fields are marked *

Back to top button