Latest
ಅಪ್ಪುಗೆ ಪದ್ಮಶ್ರೀ ಗೌರವ ಸೂಕ್ತ ಸಮಯದಲ್ಲಿ ಚರ್ಚಿಸಿ ತೀರ್ಮಾನ : ಸಿಎಂ ಬೊಮ್ಮಾಯಿ
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಪ್ರತಿಷ್ಠಿತ ಪದ್ಮಶ್ರೀ ಪುರಸ್ಕಾರ ನೀಡುವ ಸಂಬಂಧ ಯಾವ ರೀತಿ ಮಾಡಬೇಕು ಎಂಬುದರ ಕುರಿತು ಒಂದಷ್ಟು ಔಪಚಾರಿಕತೆಗಳಿದ್ದು, ಅದನ್ನು ಪೂರ್ಣಗೊಳಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ಪದಶ್ರೀ ಪುರಸ್ಕಾರ ಸಂಬಂಧ ಸೂಕ್ತ ಸಮಯದಲ್ಲಿ ಕುಟುಂಬ ಸದಸ್ಯರೂ ಸೇರಿದಂತೆ ಸಂಬಂಧಿಸಿದ ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.