Latest

ಮನೆ ಕುಸಿತ ದುರಂತ: ಮೃತಪಟ್ಟ ವ್ಯಕ್ತಿಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಮನೆ ಕುಸಿತ ದುರಂತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮನೆ ಕುಸಿತದಿಂದ ಸಂಭವಿಸಿರುವ ಅನಾಹುತದಿಂದ ಒಂದೇ ಕುಟುಂಬದ ಏಳು ಜನರು ಸಾವನ್ನಪ್ಪಿರುವುದಕ್ಕೆ ತೀವ್ರ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

ಮೃತಪಟ್ಟ ವ್ಯಕ್ತಿಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ನಾಳೆ ಘಟನಾ ಸ್ಥಳಕ್ಕೆ ಭೇಟಿ ನೀಡುವಂತೆ ಸಿಎಂ ಸಲಹೆ ನೀಡಿದ್ದಾರೆ. ಕೂಡಲೇ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

ಮೃತರ ಕುಟುಂಬಸ್ಥನಿಗೆ ಕರೆ ಮಾಡಿದ ಸಿಎಂ

ದುರಂತದಲ್ಲಿ ಬದುಕುಳಿದ ಕುಟುಂಬದ ಸದಸ್ಯ ಭೀಮಪ್ಪ ಅವರೊಂದಿಗೆ ದೂರವಾಣಿ ಮೂಲಕ ಮುಖ್ಯಮಂತ್ರಿಗಳು ಮಾತನಾಡಿ, ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಎಲ್ಲ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದು, ಪರಿಹಾರದ ಹಣವನ್ನು ತಕ್ಷಣ ತಲುಪಿಸಲಾಗುವುದು, ಸರ್ಕಾರ ನಿಮ್ಮ ಜೊತೆಗಿದೆ, ಯಾವುದೇ ಕಾರಣಕ್ಕೂ ಧೃತಿಗೆಡದಂತೆ ಧೈರ್ಯ ತುಂಬಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button