Latest

ಸಿದ್ದರಾಮಯ್ಯ ವಿರುದ್ದ ಬಿಜೆಪಿ ಅಪಪ್ರಚಾರ ಖಂಡಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಮೈಸೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯರ ವ್ಯಕ್ತಿತ್ವಕ್ಕೆ ಬಿಜೆಪಿ ಮಸಿ ಬಳಿಯುವ ಯತ್ನ ಮಾಡುತ್ತಿದ್ದು ಅಪಪ್ರಚಾರ ಮಾಡುತ್ತಿದೆ ಎಂದು ಬಿಜೆಪಿ ವಿರುದ್ದ ಕಾಂಗ್ರೆಸ್ ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ನ್ಯಾಯಾಲಯ ಮುಂಭಾಗದ ಗಾಂಧಿ ಪ್ರತಿಮೆ ಬಳಿ ಇಂದು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಸಿಎಂ ಸಿದ್ದರಾಮಯ್ಯರನ್ನು ಟೀಕಿಸುವ ಯಾವುದೇ ನೈತಿಕತೆ ಬಿಜೆಪಿ ಮುಖಂಡರಿಗೆ ಇಲ್ಲ ಈ ನಾಡು ಕಂಡ ಶೋಷಿತರ, ದಲಿತರ ಅಭಿವೃದ್ಧಿ ಹರಿಕಾರ ಸಿದ್ದರಾಮಯ್ಯ. ಅವರು ಮುಖ್ಯಮಂತ್ರಿ ಆಗಿದ್ದಾಗ ಎಸ್.ಸಿ ಹಾಗೂ ಎಸ್ಟಿ ಸಮುದಾಯದ ಅಭಿವೃದ್ಧಿಗೆ ಬಜೆಟ್ ನಲ್ಲಿ ಅತಿ ಹೆಚ್ಚು ಹಣ ನೀಡುವ ಮೂಲಕ ಹಲವಾರು ಕೊಡುಗೆಗಳನ್ನು ನೀಡಿದ್ದರು. ಈ ಕಾರಣಕ್ಕೆ ದಲಿತರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ ಎಂದರು.

ಇದು ಬಿಜೆಪಿಯಲ್ಲಿನ ದಲಿತರಿಗೂ ತಿಳಿದಿದೆ. ಈ ಸತ್ಯ ತಿಳಿದಿರುವ ಬಿಜೆಪಿ ಮುಖಂಡರು, ಸಿದ್ದರಾಮಯ್ಯ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಸಲುವಾಗಿ ಅಪಪ್ರಚಾರ ನಡೆಸುತ್ತಿದ್ದಾರೆ. ಅವರ ಈ ಪ್ರಯತ್ನ ಯಾವುದೇ ಕಾರಣಕ್ಕೂ ಯಶಸ್ವಿಯಾಗದು. ಈ ಕೂಡಲೇ ಬಿಜೆಪಿ ಮುಖಂಡರು, ಸಿದ್ದರಾಮಯ್ಯ ಅವರ ವಿರುದ್ದ ನೀಡುತ್ತಿರುವ ಹೇಳಿಕೆ ನಿಲ್ಲಿಸಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ತಪ್ಪಿದಲ್ಲಿ ಬಿಜೆಪಿ ವಿರುದ್ದ ಮತ್ತಷ್ಟು ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ. ಬಿಜೆಪಿಯು ಸಿದ್ದರಾಮಯ್ಯ ಅವರ ವಿರುದ್ದ ಯಾವುದೇ ಕುತಂತ್ರ ಅಥವಾ ಅಪಪ್ರಚಾರ ಮಾಡಿದ್ರೆ ಯಶಸ್ವಿಯಾಗದು ಈ ತಕ್ಷಣ ಸಿದ್ದರಾಮಯ್ಯರ ವಿರುದ್ದ ಅಪಪ್ರಚಾರ ನಿಲ್ಲಿಸಬೇಕು ಎಂದು ಎಚ್ಚರಿಕೆ ನೀಡಿದರು.

Related Articles

Leave a Reply

Your email address will not be published. Required fields are marked *

Back to top button