Latest
Jambu Savari: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ.
ಕೊರೊನಾ ಹಿನ್ನೆಲೆ ಈ ಬಾರಿಯೂ ಸರಳವಾಗಿ ಜಂಬೂ ಸವಾರಿ ನಡೆಸಲಾಗುತ್ತದೆ. ಜಂಬೂಸವಾರಿ ಮೈಸೂರು ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿರಲಿದೆ. ಜೋಡಿ ನಂದಿಧ್ವಜ ಸ್ತಂಭಕ್ಕೆ ಪೂಜೆ ಸಲ್ಲಿಸಲಿರುವ ಸಿಎಂ ಬಸವರಾಜ ಬೊಮ್ಮಾಯಿ ಸಂಜೆ 4.36ರಿಂದ 4.46ರ ಶುಭ ಮೀನ ಲಗ್ನದಲ್ಲಿ ಕೋಟೆ ಆಂಜನೇಯ ಸ್ವಾಮಿ ದೇಗುಲದ ಬಳಿ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಜಂಬೂ ಸವಾರಿಗೆ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.
ಇಂದು ಸಂಜೆ 5 ರಿಂದ 5.30ರ ಶುಭ ಲಗ್ನದಲ್ಲಿ ಚಾಮುಂಡೇಶ್ವರಿ ದೇವಿಗೆ ಸಿಎಂ ಬಸವರಾಜ ಬೊಮ್ಮಾಯಿ ಪುಷ್ಪಾರ್ಚನೆ ಮಾಡಲಿದ್ದಾರೆ. ಬಳಿಕ ಯದುವೀರ ಕೃಷ್ಣದತ್ತ ಒಡೆಯರ್ ಚಿನ್ನದ ಅಂಬಾರಿಯಲ್ಲಿರುವ ದೇವಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಸಚಿವ ಸೋಮಶೇಖರ್, ಮೇಯರ್ ಸುನಂದಾ ಪಾಲನೇತ್ರ, ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಭಾಗಿಯಾಗಲಿದ್ದಾರೆ.