Latest

Dasara 2021: ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸಲು ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ

ಮೈಸೂರು: ಕೊರೊನಾ ಹಿನ್ನೆಲೆ ಮೈಸೂರು ದಸರಾ ಜಂಬೂ ಸವಾರಿ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಕೋವಿಡ್ ನೆಗೆಟಿವ್​ ವರದಿ(RT-PCR) ಕಡ್ಡಾಯ ಮಾಡಲಾಗಿದೆ.

ಜಂಬೂ ಸವಾರಿಯಲ್ಲಿ ಭಾಗವಹಿಸುವ ಎಲ್ಲಾ ಕಲಾವಿದರು, ಅಧಿಕಾರಿಗಳು,ಸಿಬ್ಬಂದಿ ವರ್ಗ, ಮಾಧ್ಯಮ ಪ್ರತಿನಿಧಿಗಳು ಹಾಗೂ ಆಹ್ವಾನಿತರು ಕೋವಿಡ್ ಪರೀಕ್ಷೆ ಮಾಡಿಸಿ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯಗೊಳಿಸಲಾಗಿದೆ.

ಕೊರೊನಾ ಭೀತಿ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ವಿಶ್ವ ವಿಖ್ಯಾತ ಮೈಸೂರು ದಸರಾಗೆ ಕರೋನಾ ಕರಿನೆರಳು ಬೀಳದಂತೆ ಈ ಕ್ರಮ ಕೈಗೊಳ್ಳಲಾಗಿದೆ.

Related Articles

Leave a Reply

Your email address will not be published.

Back to top button