Latest

ಜಮ್ಮು ಕಾಶ್ಮೀರ: ಕಂದಕಕ್ಕೆ ಉರುಳಿಬಿದ್ದ ಬಸ್​​: 8 ಮಂದಿ ಸಾವು

ಜಮ್ಮು ಕಾಶ್ಮೀರ ​: ಮಿನಿ ಬಸ್‌ ಒಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ.

ಈ ಬಸ್‌ ತತ್ರಿಯಿಂದ ದೋಡಾಕ್ಕೆ ಹೊರಟಿತ್ತೆಂದು ಹೇಳಲಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ.

Related Articles

Leave a Reply

Your email address will not be published.

Back to top button